ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣ: ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವು: ಸಾವಿನ ಸಂಖ್ಯೆ 6ಕ್ಕೆ ಏರಿಕೆ
ಹುಬ್ಬಳ್ಳಿ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು 9 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆಯಲ್ಲಿ ಈಗಾಗಲೇ 5 ಜನ ಅಯ್ಯಪ್ಪ ಮಾಲಾಧಾರಿಗಳು ಸಾವನ್ನಪ್ಪಿದ್ದರು. ಇದೀಗ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.
ಮಂಜುನಾಥ ವಾಗ್ಮೋಡೆ ಮೃತಪಟ್ಟ ಅಯ್ಯಪ್ಪ ಮಾಲಾಧಾರಿಯಾಗಿದ್ದಾರೆ. ಹುಬ್ಬಳ್ಳಿಯ ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಡಿಸೆಂಬರ್ 22ರಂದು ಸಂಭವಿಸಿದ್ದ ಸಿಲಿಂಡರ್ ಸ್ಫೋಟದಲ್ಲಿ 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದರು. ಈ ಪೈಕಿ ಈಗಾಗಲೇ ನಾಲ್ವರು ಸಾವನ್ನಪ್ಪಿದ್ದರು. ಇಂದು ಇಬ್ಬರು ಮತ್ತೆ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.
ಸದ್ಯ ಇನ್ನುಳಿದ ಮೂವರಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ. ರಾಜ್ಯ ಸರ್ಕಾರವು ಈಗಾಗಲೇ ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿಗಳ ಪರಿಹಾರವನ್ನು ಘೋಷಣೆ ಮಾಡಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: