ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೇ ಇಬ್ಬರು ಅಯ್ಯಪ್ಪ ಭಕ್ತರು ಸಾವು - Mahanayaka
5:03 AM Wednesday 22 - January 2025

ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೇ ಇಬ್ಬರು ಅಯ್ಯಪ್ಪ ಭಕ್ತರು ಸಾವು

ayyappa
26/12/2024

ಹುಬ್ಬಳ್ಳಿ: ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ  9 ಮಂದಿ ಅಯ್ಯಪ್ಪ ಭಕ್ತರ ಪೈಕಿ ಇಬ್ಬರು ಚಿಕಿತ್ಸೆ ಫಲಿಸದೇ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ನಿಜಲಿಂಗಪ್ಪ ಬೇಪುರಿ (58), ಸಂಜಯ್​​ ಸವದತ್ತಿ (18) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಉಣಕಲ್‌ ನ ಅಯ್ಯಪ್ಪ ದೇವಸ್ಥಾನದಲ್ಲಿ ಗ್ಯಾಸ್​ ಸಿಲಿಂಡರ್ ಸ್ಫೋಟದಿಂದ ಇವರು ಗಂಭೀರವಾಗಿ ಗಾಯಗೊಂಡಿದ್ದರು.

ಇನ್ನುಳಿದ 7 ಮಂದಿ ಮಾಲಾಧಾರಿಗಳಿಗೆ ಚಿಕಿತ್ಸೆ ಮುಂದುವರಿಸಲಾಗಿದೆ. ಡಿಸೆಂಬರ್ 22ರಂದು ಈ ಘಟನೆ ನಡೆದಿತ್ತು. ಹುಬ್ಬಳ್ಳಿಯ ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಅಯ್ಯಪ್ಪ ಮಾಲಾಧಾರಿಗಳು ಮಲಗಿದ್ದ ವೇಳೆ ಗ್ಯಾಸ್ ಸೋರಿಕೆಯಾಗಿತ್ತು. ಅಯ್ಯಪ್ಪ ಸ್ವಾಮಿಗೆ ಹಚ್ಚಿಟ್ಟಿದ್ದ ದೀಪವೇ ಈ ದುರಂತಕ್ಕೆ ಕಾರಣವಾಯಿತು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ