ಮದುವೆ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: ನಾಲ್ವರು ಅತಿಥಿಗಳು ಸಾವು, 60 ಜನರಿಗೆ ಗಾಯ - Mahanayaka

ಮದುವೆ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: ನಾಲ್ವರು ಅತಿಥಿಗಳು ಸಾವು, 60 ಜನರಿಗೆ ಗಾಯ

jodhpur
09/12/2022

ಜೈಪುರ: ಮದುವೆ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ನಾಲ್ವರು ಅತಿಥಿಗಳು ದಾರುಣವಾಗಿ ಸಾವನ್ನಪ್ಪಿದ ಘಟನೆ ರಾಜಸ್ಥಾನದ ಜೋಧ್ ಪುರ ಬಳಿಯ ಜೈಪುರದಲ್ಲಿ ನಡೆದಿದೆ.

ಜೋಧ್’ಪುರದಿಂದ 60 ಕಿ.ಮೀ. ದೂರದಲ್ಲಿರುವ ಭುಂಗ್ರಾ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದ್ದು, ವರನ ಮನೆಯಿಂದ ಮದುವೆ ಮಂಟಪಕ್ಕೆ ಮೆರವಣಿಗೆ ಹೊರಡಲು ಸಿದ್ಧತೆ ನಡೆಸುತ್ತಿದ್ದ ವೇಳೆ ಸಿಲಿಂಡರ್ ಬ್ಲಾಸ್ಟ್ ಆಗಿದೆ.

ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದರೆ, 60 ಜನರು ಗಾಯಗೊಂಡಿದ್ದಾರೆ. ಸ್ಫೋಟದ ತೀವ್ರತೆಗೆ ಮದುವೆ ಮನೆಯ ಒಂದು ಭಾಗ ಕುಸಿದು ಬಿದ್ದಿದೆ.  ಘಟನೆಯಲ್ಲಿ ಗಾಯಗೊಂಡವರ ಪೈಕಿ 12 ಜನರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ