ಗ್ಯಾಸ್ ಗೀಸರ್ ಸೋರಿಕೆಯಾಗಿ ಮದುವೆಯ ಮರುದಿನವೇ ವಧು ಸಾವು!
ನವದೆಹಲಿ: ಗ್ಯಾಸ್ ಗೀಸರ್ ಸೋರಿಕೆಯಿಂದ ನವ ವಧುವೋರ್ವಳು ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಮೀರತ್ ನಗರದಲ್ಲಿ ನಡೆದಿದೆ.
ಮದುವೆಯಾದ ಮರುದಿನವೇ ಈ ದುರ್ಘಟನೆ ನಡೆದಿದ್ದು, ನವವಧು ಸ್ನಾನ ಮಾಡಲೆಂದು ಸ್ನಾನಗೃಹಕ್ಕೆ ತೆರಳಿದ್ದಳು, ಆದರೆ ಎಷ್ಟು ಹೊತ್ತಾದ್ರೂ ಹೊರ ಬಾರದೇ ಇದ್ದಾಗ ಕುಟುಂಬಸ್ಥರು ಬಾಗಿಲು ತಟ್ಟಿ ಕರೆದಿದ್ದಾರೆ. ಈ ವೇಳೆ ಯಾವುದೇ ಪ್ರತಿಕ್ರಿಯೆ ಇಲ್ಲದಿದ್ದಾಗ ಬಾಗಿಲು ಮುರಿದು ಸ್ನಾನಗೃಹದ ಒಳಗೆ ಪ್ರಶ್ನಿಸಿದ್ದಾರೆ.
ಸ್ನಾನ ಗೃಹದಲ್ಲಿ ಯುವತಿಯ ಪ್ರಜ್ಞಾಹೀನ ಸ್ಥಿತಿಯಲ್ಲಿರುವುದನ್ನು ಕಂಡು ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಆಕೆ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw
























