ದಮ್ಮಾಮ್ ನಲ್ಲಿ ಭಾರೀ ಅವಘಡ: 20 ಮಂದಿಗೆ ಗಾಯ
01/10/2024
ಸೌದಿ ಅರೇಬಿಯಾದ ದಮ್ಮಾಮ್ ನಲ್ಲಿ ಭಾರೀ ದೊಡ್ಡ ದುರಂತ ಸಂಭವಿಸಿದೆ. ಫ್ಲ್ಯಾಟ್ ನಲ್ಲಿ ಅನಿಲ ಸೋರಿಕೆಯಾಗಿ ಸ್ಪೋಟ ನಡೆದಿದ್ದು ಮೂವರು ಸಾವಿಗೀಡಾಗಿದ್ದಾರೆ. 20 ಮಂದಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ಮೂರು ಅಂತಸ್ತಿನ ಕಟ್ಟಡದ ಫ್ಲ್ಯಾಟ್ ನಲ್ಲಿ ಈ ಅಡುಗೆ ಅನಿಲ ಸೋರಿಕೆ ಮತ್ತು ಸ್ಪೋಟ ನಡೆದಿದೆ. ಅಡುಗೆ ಮನೆಯಲ್ಲಿ ಉಂಟಾದ ಸೋರಿಕೆಯಿಂದ ಈ ಅನಾಹುತ ಸಂಭವಿಸಿದೆ . ಸ್ಪೋಟದ ಬಳಿಕ ಬೆಂಕಿ ಹತ್ತಿಕೊಂಡಿದೆ. ಗಾಯಗೊಂಡವರಲ್ಲಿ ಮೂವರ ಸ್ಥಿತಿ ಚಿಂತಾ ಜನಕವಾಗಿದೆ ಎಂದು ತಿಳಿದು ಬಂದಿದೆ ಗಾಯಗೊಂಡವರಲ್ಲಿ ವಿದೇಶಿಯರು ಇದ್ದಾರೆ ಎಂದು ತಿಳಿದುಬಂದಿದೆ
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth