ಗೌರವ್ ಗೊಗೊಯ್ ನಮಾಜ್ ಮಾಡಿದ್ದಾರೆ, ಆದರೆ ರಾಮ ಮಂದಿರಕ್ಕೆ ಭೇಟಿ ನೀಡಿಲ್ಲ: ಹಿಮಂತ ಶರ್ಮಾ ಕಿಡಿ

ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಅವರು “ಅಯೋಧ್ಯೆಯ ರಾಮ ಮಂದಿರಕ್ಕೆ ಇನ್ನೂ ಭೇಟಿ ನೀಡಿಲ್ಲ” ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ರಾಮ ಮಂದಿರದ ಪ್ರಾಣ ಪ್ರತಿಷ್ಠಾ ಸಮಾರಂಭದ ಬಗ್ಗೆ ಕಾಂಗ್ರೆಸ್ ಸಂಸದರು ಅದೇ ಗೌರವವನ್ನು ತೋರಿಸಬೇಕಾಗಿತ್ತು ಎಂದು ಅವರು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಶರ್ಮಾ, ಜೋರ್ಹತ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೌರವ್ ಗೊಗೊಯ್ ಅವರಿಗೆ ನಮಾಜ್ ಮಾಡಲು ಸರಿಯಾದ ಭಂಗಿ ತಿಳಿದಿದೆ. ಅವರು ಅದನ್ನು ಎಲ್ಲಿಂದ ಕಲಿತಿದ್ದಾರೆಂದು ನನಗೆ ತಿಳಿದಿಲ್ಲ.
ವಾಸ್ತವವೆಂದರೆ ನಾನು ಕೂಡ ಈದ್ ಶುಭಾಶಯಗಳನ್ನು ಕೋರಿದ್ದೇನೆ. ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಕೂಡ ಶುಭಾಶಯ ಹೇಳಿದ್ದಾರೆ. ಆದರೆ ನಾನು ಎತ್ತಿ ತೋರಿಸಲು ಬಯಸುವುದೇನೆಂದರೆ, ಗೌರವ್ ಗೊಗೊಯ್ ಮತ್ತು ಅಖಿಲ್ ಗೊಗೊಯ್ ಅವರು ಈದ್ ಪ್ರಾರ್ಥನೆಯ ಸಮಯದಲ್ಲಿ ತೋರಿಸಿದಷ್ಟು ಭಕ್ತಿಯನ್ನು ರಾಮ ಮಂದಿರದ ಪ್ರಾಣ ಪ್ರತಿಷ್ಠಾ ಸಮಾರಂಭದ ಬಗ್ಗೆ ಏಕೆ ತೋರಿಸಲಿಲ್ಲ?” ಎಂದು ಅವರು ಪ್ರಶ್ನಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth