ಒಡಿಶಾ ದುರಂತ: ಅನಾಥರಾದ ಮಕ್ಕಳ ಶಿಕ್ಷಣ ಜವಾಬ್ದಾರಿ ನನ್ನದು ಎಂದ ಗೌತಮ್ ಅದಾನಿ..! - Mahanayaka

ಒಡಿಶಾ ದುರಂತ: ಅನಾಥರಾದ ಮಕ್ಕಳ ಶಿಕ್ಷಣ ಜವಾಬ್ದಾರಿ ನನ್ನದು ಎಂದ ಗೌತಮ್ ಅದಾನಿ..!

04/06/2023

ಒಡಿಶಾ ಭೀಕರ ಸರಣಿ ರೈಲು ದುರಂತದಲ್ಲಿ ತಂದೆ ಮತ್ತು ತಾಯಿ ಇಬ್ಬರನ್ನೂ ಕಳೆದುಕೊಂಡು ಅನಾಥರಾದ ಮಕ್ಕಳಿಗೆ ತಾನು ಶಿಕ್ಷಣದ ಜವಾಬ್ದಾರಿ ಹೊರುವುದಾಗಿ ಉದ್ಯಮಿ ಗೌತಮ್ ಅದಾನಿ ಪ್ರಕಟಿಸಿದ್ದಾರೆ.

ದುರಂತದಲ್ಲಿ ಸಂತ್ರಸ್ತರಾಗಿರುವ ಪ್ರತಿಯೊಬ್ಬರಿಗೂ ಹಾಗೂ ಅವರ ಕುಟುಂಬದವರಿಗೂ ನೆರವು ನೀಡುವುದು ಎಲ್ಲರ ಜವಾಬ್ದಾರಿ ಎಂದು ಅಭಿಪ್ರಾಯಪಟ್ಟಿದ್ದಾರೆ. ಈ ಸಂಬಂಧ ಅವರು ಟ್ವೀಟ್ ಮಾಡಿ ದುರಂತದಿಂದ ಅನಾಥರಾದ ಮಕ್ಕಳ ಶಾಲಾ ಶಿಕ್ಷಣದ ವ್ಯವಸ್ಥೆ ತಾನು ವಹಿಸಿಕೊಳ್ಳುವುದಾಗಿ ತಿಳಿಸಿದ್ದಾರೆ. ಅದರ ವಿವರ ಹೀಗಿದೆ.

‘ಒಡಿಸಾ ರೈಲು ದುರಂತ ಘಟನೆಯಿಂದ ನಮಗೆ ಬಹಳ ನೋವು ತಂದಿದೆ. ಈ ಅಪಘಾತದಲ್ಲಿ ತಮ್ಮ ಪೋಷಕರನ್ನು ಕಳೆದುಕೊಂಡ ಮುಗ್ಧ ಮಕ್ಕಳ ಶಾಲಾ ಶಿಕ್ಷಣದ ಜವಾಬ್ದಾರಿಯನ್ನು ಅಡಾಣಿ ಸಮೂಹ ಸಂಸ್ಥೆಯು ವಹಿಸಿಕೊಳ್ಳುತ್ತದೆ.

ಸಂತ್ರಸ್ತರು ಮತ್ತವರ ಕುಟುಂಬಗಳಿಗೆ ನೆರವು ಒದಗಿಸುವುದು ಮತ್ತು ಮಕ್ಕಳಿಗೆ ಒಳ್ಳೆಯ ಭವಿಷ್ಯ ರೂಪಿಸುವುದು ನಮ್ಮೆಲ್ಲರ ಜಂಟಿ ಜವಾಬ್ದಾರಿ ಆಗಿದೆ’ ಎಂದು ಅದಾನಿ ಗ್ರೂಪ್ ಮುಖ್ಯಸ್ಥ ಗೌತಮ್ ಅದಾನಿ ತಮ್ಮ ಟ್ವೀಟ್​ನಲ್ಲಿ ಹೇಳಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

Disclaimer:

www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.

ಇತ್ತೀಚಿನ ಸುದ್ದಿ