ಜನವರಿ 30ರಂದು ಗ್ಯಾರೇಜ್ ಮಾಲಕರ, ನೌಕರರ ಮಹಾ ಸಮಾವೇಶ
ದಕ್ಷಿಣ ಕನ್ನಡ ಗ್ಯಾರೇಜ್ ಮಾಲಕರ ಸಂಘದ ಆಶ್ರಯದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಗ್ಯಾರೇಜ್ ಮಾಲಕರ ಹಾಗೂ ನೌಕರರ ಮಹಾ ಸಮಾವೇಶವನ್ನು ಜನವರಿ 30ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಏರ್ಪಡಿಸಲಾಗಿದೆ.
ಈ ಕುರಿತು ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಂಘದ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಕಮಿಲ, ‘ಗ್ರಾಹಕ– ಕಾರ್ಮಿಕ ಹಾಗೂ ಮಾಲಕರ ಬಾಂಧವ್ಯ, ಅಸಂಘಟಿತ ಕಾರ್ಮಿಕರಿಗೆ ಸರ್ಕಾರದ ಸೌಲಭ್ಯಗಳು, ಕಾರ್ಮಿಕರ ಆರೋಗ್ಯ ಸುರಕ್ಷತೆ, ಕಾರ್ಮಿಕ ಕಾನೂನು ಕುರಿತು ಕಾರ್ಮಿಕರಿಗೆ ವಿಶೇಷ ಉಪನ್ಯಾಸವು ಮೂಡಿಸಲು ಈ ಸಮಾವೇಶ ಏರ್ಪಡಿಸಲಾಗಿದೆ. ಸುಮಾರು 6 ಸಾವಿರ ಕಾರ್ಮಿಕರು ಭಾಗವಹಿಸಲಿದ್ದಾರೆ.
‘ಸಮಾವೇಶಕ್ಕೂ ಮುನ್ನ ಬಲ್ಮಠದ ಯುಬಿಎಂ ಮೈದಾನದಿಂದ ಪುರಭವನದವರೆಗೆ ಜಾಥಾ ಹಮ್ಮಿಕೊಳ್ಳಲಾಗಿದ್ದು, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಹಾಗೂ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಬೆಳಿಗ್ಗೆ 9.30ಕ್ಕೆ ಉದ್ಘಾಟಿಸುವರು. ಮಹಾ ಸಮಾವೇಶವನ್ನು ಕಾರ್ಮಿಕ ಸಚಿವ ಎ.ಶಿವರಾಮ್ ಹೆಬ್ಬಾರ್ ಬೆಳಿಗ್ಗೆ 10:30ಕ್ಕೆ ಉದ್ಘಾಟಿಸುವರು.
ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸುವರು. ಗ್ಯಾರೇಜ್ ಮಾಲೀಕರ ಮತ್ತು ಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಂಜೆ 3ರಿಂದ ಸಮಾಲೋಚನೆ ಸಭೆ ನಡೆಯಲಿದ್ದು, ಕೆಲವೊಂದು ನಿರ್ಣಯ ಕೈಗೊಳ್ಳಲಿದ್ದೇವೆ‘ ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw




























