ನಿಮ್ಮ ವ್ಯಾಪಾರಕ್ಕೆ ಸಾಲ ಪಡೆಯುವುದು ಈಗ ಸುಲಭ | ಶೇ.7ರಷ್ಟು ಸಬ್ಸಿಡಿಯೂ ಸಿಗಲಿದೆ
ನವದೆಹಲಿ: ಬೀದಿ ಬದಿ ವ್ಯಾಪಾರಸ್ಥರಿಗೆ ಸಾಲ ವಿತರಿಸುವ ಕಾರ್ಯವನ್ನು ತ್ವರಿತಗೊಳಿಸಲು ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಕ್ರಮಕೈಗೊಂಡಿದೆ.
ಪ್ರಧಾನಮಂತ್ರಿ ಸ್ವನಿಧಿ ಯೋಜನೆಯಡಿ ವಿವಿಧ ಬ್ಯಾಂಕುಗಳ ಜೊತೆಗೆ ಸ್ವನಿಧಿ ಯೋಜನೆಯ ಪೋರ್ಟಲ್ ಅನ್ನು ಸಂಯೋಜಿಸಲಾಗಿದೆ. ಇದಕ್ಕೆ ಅನುಕೂಲವಾಗುವಂತೆ ಅಪ್ಲಿಕೇಶನ್ ಅಭಿವೃದ್ಧಿಪಡಿಸಲಾಗಿದೆ.
ಸ್ವನಿಧಿ ಯೋಜನೆಯಡಿ ಸಾಲ ವಿತರಣೆ ವಿಳಂಬವಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಈ ಕ್ರಮವನ್ನು ಕೈಗೊಳ್ಳಲಾಗಿದೆ. ಅಪ್ಲಿಕೇಶನ್ ಪ್ರೋಗ್ರಾಮಿಂಗ್ ಇಂಟರ್ಫೇಸ್ ಬಳಸುವ ಮೂಲಕ ಶೀಘ್ರವಾಗಿ ಸಾಲ ಮಂಜೂರು ಮಾಡಲು ಉದ್ದೇಶಿಸಲಾಗಿದೆ.
ಬೀದಿ ಬದಿ ವ್ಯಾಪಾರಸ್ಥರಿಗೆ ತಲಾ 10 ಸಾವಿರ ರೂಪಾಯಿ ನೀಡಲಿದ್ದು 10 ಕಂತುಗಳಲ್ಲಿ ವ್ಯಾಪಾರಿಗಳು ಮರು ಪಾವತಿಸಬೇಕು. ನೀವು ಸಮಯಕ್ಕೆ ಸರಿಯಾಗಿ ಸಾಲ ಪಾವತಿ ಮಾಡಿದರೆ ಶೇ. 7ರಷ್ಟು ಸಬ್ಸಿಡಿ ನಿಮ್ಮದಾಗಲಿದೆ.
Disclaimer:
www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.