ಪತ್ನಿಯನ್ನು ಕೊಂದು 4 ದಿನಗಳ ಕಾಲ ಶವದ ಜತೆಗಿದ್ದ ಪತಿ..! ಕೊನೆಗೂ ಬಯಲಾಯಿತು ಕ್ರೂರ ಕೃತ್ಯ

ಪತ್ನಿಯನ್ನು ಕತ್ತು ಹಿಸುಕಿ ಕೊಂದು ಶವವನ್ನು ನಾಲ್ಕು ದಿನಗಳ ಕಾಲ ತನ್ನ ಮನೆಯಲ್ಲಿ ಇರಿಸಿದ ಆರೋಪದ ಮೇಲೆ 55 ವರ್ಷದ ವ್ಯಕ್ತಿಯನ್ನು ಭಾನುವಾರ ಗಾಜಿಯಾಬಾದ್ ನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಭರತ್ ಸಿಂಗ್ ಮದ್ಯದ ಅಮಲಿನಲ್ಲಿ ಈ ಘಟನೆಯನ್ನು ನೆರೆಹೊರೆಯವರಿಗೆ ತಿಳಿಸಿದಾಗ ಈ ಘಟನೆ ಬೆಳಕಿಗೆ ಬಂದಿದೆ.
ಅಪಾರ್ಟ್ ಮೆಂಟ್ ನಿಂದ ವಿಪರೀತ ವಾಸನೆ ಹೊರಬರಲು ಪ್ರಾರಂಭಿಸಿದಾಗ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಮಾಹಿತಿಯ ಮೇರೆಗೆ ಪೊಲೀಸರು ತಕ್ಷಣ ಸ್ಥಳಕ್ಕೆ ತಲುಪಿ ಶವವನ್ನು ವಶಪಡಿಸಿಕೊಂಡಿದ್ದಾರೆ. ಶವದ ಸ್ಥಿತಿಯು ಸುಮಾರು 3 ರಿಂದ 4 ದಿನಗಳಷ್ಟು ಹಳೆಯದು ಎಂದು ಸೂಚಿಸುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆಯ ಶವ ಅವರ ಮಲಗುವ ಕೋಣೆಯಲ್ಲಿ ಪತ್ತೆಯಾಗಿದೆ.
ಆರೋಪಿಯನ್ನು ತಕ್ಷಣ ವಶಕ್ಕೆ ಪಡೆಯಲಾಗಿದೆ. ವಿಚಾರಣೆಯ ಸಮಯದಲ್ಲಿ ಕೌಟುಂಬಿಕ ಕಲಹದ ಸಮಯದಲ್ಲಿ ತನ್ನ 51 ವರ್ಷದ ಪತ್ನಿ ಸುನೀತಾಳನ್ನು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಮಹಿಳೆಯ ದೇಹ ಕೊಳೆಯಲು ಪ್ರಾರಂಭಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
- ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth