ಗಿಣಿರಾಮ ಧಾರಾವಾಹಿಯ ಅಭಿಮಾನಿಗಳಿಗೆ ಬಿಗ್ ಶಾಕ್: ಮಹತಿಗೆ ಕೊರೊನಾ ಪಾಸಿಟಿವ್ - Mahanayaka

ಗಿಣಿರಾಮ ಧಾರಾವಾಹಿಯ ಅಭಿಮಾನಿಗಳಿಗೆ ಬಿಗ್ ಶಾಕ್: ಮಹತಿಗೆ ಕೊರೊನಾ ಪಾಸಿಟಿವ್

ginirama
20/04/2021


Provided by

ಬೆಂಗಳೂರು: ಗಿಣಿರಾಮ ಧಾರವಾಹಿ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್ ಎದುರಾಗಿದ್ದು, ಮಹತಿ ಪಾತ್ರದಲ್ಲಿ ನಟಿಸುತ್ತಿರುವ ನಟಿ ನಯನಾ ಅವರಿಗೆ ಕೊವಿಡ್ ದೃಢಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಮುಂದಿನ ಕೆಲವು ಸಂಚಿಕೆಗಳಲ್ಲಿ ಮಹತಿ ಪಾತ್ರ ಹೇಗೆ ಬರಲಿದೆ ಎಂದು ಧಾರಾವಾಹಿಯ ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಮಹತಿ ಪಾತ್ರದಲ್ಲಿ ನಟಿಸುತ್ತಿರುವ ನಯನಾ ಅವರು ತಮಗೆ ಕೊರೊನಾ ದೃಢಪಟ್ಟಿರುವ ವಿಚಾರಕ್ಕೆ ಸಂಬಂಧಿಸಿದಂತೆ  ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ನನಗೆ ಕೊರೊನಾ ಸೋಂಕು ದೃಢಪಟ್ಟಿದೆ. ಹಾಗಾಗಿ ಮನೆಯಲ್ಲಿಯೇ ಇರುತ್ತೇನೆ. ಯಾರು ಕೂಡ ಭಯಪಡುವ ಅಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ.

ತಾನು 15 ದಿನಗಳ ಕಾಲ ಕ್ವಾರಂಟೈನ್ ಆಗುತ್ತಿದ್ದೇನೆ. ಹಾಗಾಗಿ ಸ್ಕ್ರಿಪ್ಟ್ ನಲ್ಲಿ ಕೊಂಚ ಬದಲಾವಣೆಯಾಗುವ ಸಾಧ್ಯತೆಗಳಿವೆ ಎಂದು ಅವರು ಬರೆದುಕೊಂಡಿದ್ದಾರೆ. ಬೇಗ ಗುಣಮುಖರಾಗಿ ಧಾರಾವಾಹಿ ಸೆಟ್ ಗೆ ಮರಳುತ್ತೇನೆ ಎಂದು ಅವರು ಬರೆದುಕೊಂಡಿದ್ದಾರೆ.

ಇತ್ತೀಚಿನ ಸುದ್ದಿ