10:13 PM Friday 12 - December 2025

ಮನೆಯ ಮೇಲೆ ತಡೆಗೋಡೆ ಬಿದ್ದು ಬಾಲಕಿ ಸಾವು!

death
30/05/2025

ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ವಿಪರೀತ ಮಳೆಗೆ ಗುಡ್ಡ ಕುಸಿದ ಪರಿಣಾಮ ಮನೆಯ ಕೊಠಡಿಯ ಕಿಟಕಿ ಬಾಲಕಿಯ ಮೇಲೆ ಬಿದ್ದು ಬಾಲಕಿ ಸಾವನ್ನಪ್ಪಿರುವ ಘಟನೆ ದೇರಳಕಟ್ಟೆ ಸಮೀಪದ ಬೆಳ್ಮ ಗ್ರಾಮದ ಕಾನಕರೆ ಎಂಬಲ್ಲಿ ನಡೆದಿದೆ.

ಕಾನಕರೆ ನಿವಾಸಿ ನೌಶಾದ್ ಎಂಬವರ ಪುತ್ರಿ ಫಾತಿಮಾ ನಹಿಮಾ(10) ಮೃತಪಟ್ಟ ಬಾಲಕಿ ಎಂದು ತಿಳಿದು ಬಂದಿದೆ. ಮನೆಯ ಹಿಂಬದಿಯ ಗುಡ್ಡ ಕುಸಿದ ಪರಿಣಾಮ ತಡೆಗೋಡೆ ಕುಸಿದು ಬಿದ್ದಿದ್ದು, ಈ ವೇಳೆ ಮನೆಯ ಕಿಟಕಿ ಮಗುವಿನ ಮೇಲೆ ಬಿದ್ದ ಪರಿಣಾಮ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.

ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿಯನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಬಾಲಕಿ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾಳೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version