8:35 PM Wednesday 26 - November 2025

ವಿದ್ಯಾರ್ಥಿ ನಿಲಯದಲ್ಲಿ ಮಗುವಿಗೆ ಜನ್ಮ ನೀಡಿದ ಬಾಲಕಿ: ಮಕ್ಕಳ ಹಕ್ಕುಗಳ ಆಯೋಗದಿಂದ ಸ್ವಯಂ ಪ್ರೇರಿತ ದೂರು ದಾಖಲು

pocso act
26/11/2025

ಕೊಪ್ಪಳ: ಹತ್ತನೇ ತರಗತಿ ವಿದ್ಯಾರ್ಥಿನಿ‌ ಕುಕನೂರು ತಾಲೂಕಿನ ಶಾಲೆಯ ವಸತಿ ನಿಲಯದಲ್ಲಿ ಮಗುವಿಗೆ ಜನ್ಮ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ  ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರು ಪತ್ರ ಬರೆದು, ಮೂರು ದಿನಗಳೊಳಗೆ  ಆಯೋಗಕ್ಕೆ  ಮಾಹಿತಿ ನೀಡಲು ಸೂಚನೆ ನೀಡಿದ್ದಾರೆ.

ಮೆಟ್ರಿಕ್ ಪೂರ್ವ ವಸತಿ ನಿಲಯದಲ್ಲಿಯೇ ವಿದ್ಯಾರ್ಥಿನಿಗೆ ಹೆರಿಗೆಯಾಗಿದ್ದು, ಬಳಿಕ ತಾಯಿ ಹಾಗೂ ನವಜಾತ ಶಿಶುವನ್ನ ಆಸ್ಪತ್ರೆಗೆ ದಾಖಲಿಸಾಗಿದೆ. ಸದ್ಯ ತಾಯಿ–ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ಘಟನೆ ಸಂಬಂಧ ವಸತಿ ನಿಲಯದ ಸಿಬ್ಬಂದಿ ನಿರ್ಲಕ್ಷ್ಯ ಎದ್ದು ಕಾಣುತ್ತಿರುವ ಹಿನ್ನಲೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಈ ಬಗ್ಗೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ ಎನ್ನಲಾಗಿದೆ.

ವಿದ್ಯಾರ್ಥಿನಿ‌ ಮಗುವಿಗೆ ಜನ್ಮ ನೀಡಿರುವ ಬಗ್ಗೆ ಈಗಾಗಲೇ ಕುಕನೂರ ಪೊಲೀಸ್ ಠಾಣೆಯಲ್ಲಿ ಪೊಕ್ಸೋ ಕೇಸ್ ಕೂಡ ದಾಖಲಾಗಿದೆ. ಪ್ರಕರಣ ಸಂಬಂಧ ಯಲಬುರ್ಗಾ ಶಾಸಕ ಬಸವರಾಜ್ ರಾಯರೆಡ್ಡಿ ಪ್ರತಿಕ್ರಿಯಿಸಿದ್ದು, ಈಗಾಗಲೇ ವಾರ್ಡನ್ ಅವರನ್ನು ಅಮಾನತ್ತು ಮಾಡಲಾಗಿದೆ. ಘಟನೆಗೆ ಕಾರಣವಾದ ವ್ಯಕ್ತಿಯನ್ನು ಅರೆಸ್ಟ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version