ಬಾಲಕಿಯನ್ನು ಅಪಹರಿಸಿ ಒಂದೂವರೆ ತಿಂಗಳವರೆಗೆ ಅತ್ಯಾಚಾರ: ಆರೋಪಿ ಅರೆಸ್ಟ್

29/08/2023
15 ವರ್ಷ ಬಾಲಕಿಯನ್ನು ಅಪಹರಿಸಿದ ವ್ಯಕ್ತಿಯೋರ್ವ ಒಂದೂವರೆ ತಿಂಗಳುಗಳ ಕಾಲ ನಿರಂತರವಾಗಿ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ನಡೆದಿದ್ದು, ಇದೀಗ ಪೊಲೀಸರು ಬಾಲಕಿಯನ್ನು ರಕ್ಷಿಸಿದ್ದಾರೆ.
ಜುಲೈ 9ರಂದು ಬಾಲಕಿ ಕೊತ್ವಾಲಿ ಪೊಲೀಸ್ ಠಾಣಾ ವ್ಯಾಪ್ತಿಯ ತನ್ನ ಗ್ರಾಮದಿಂದ ನಾಪತ್ತೆಯಾಗಿದ್ದಳು. ಮರುದಿನ ಬಾಲಕಿಯ ತಂದೆ ದೂರು ನೀಡಿದ್ದು, ಈ ಆಧಾರದಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆಗಸ್ಟ್ 26ರಂದು ಬಾಲಕಿಯನ್ನು ಡಿಯೋರಿಯಾ ಎಂಬಲ್ಲಿಂದ ರಕ್ಷಿಸಿದ್ದಾರೆ. ಬಿಹಾರದ ಸಿವಾನ್ ಜಿಲ್ಲೆಯ ನಿವಾಸಿ ರಾಹುಲ್ ಕುಮಾರ್ ಸಿಂಗ್ (19) ಎಂಬಾತ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ನಡೆಸಿದ ವ್ಯಕ್ತಿಯಾಗಿದ್ದಾನೆ.
ಬಾಲಕಿಯನ್ನು ಅಪಹರಿಸಿದ ಬಳಿಕ ಡಿಯೋರಿಯಾಗೆ ಕರೆದೊಯ್ದಿದ್ದ ಆರೋಪಿ, ಆಕೆಯನ್ನ ಸೆರೆಯಲ್ಲಿಟ್ಟು ಒಂದೂವರೆ ತಿಂಗಳವರೆಗೆ ಅತ್ಯಾಚಾರ ನಡೆಸಿದ್ದಾನೆ.