ವಿಶೇಷ ಪೂಜೆಯ ನೆಪದಲ್ಲಿ ದೇವಸ್ಥಾನದಲ್ಲಿ ಪೂಜಾರಿಯಿಂದ ಬಾಲಕಿಗೆ ಲೈಂಗಿಕ ದೌರ್ಜನ್ಯ - Mahanayaka

ವಿಶೇಷ ಪೂಜೆಯ ನೆಪದಲ್ಲಿ ದೇವಸ್ಥಾನದಲ್ಲಿ ಪೂಜಾರಿಯಿಂದ ಬಾಲಕಿಗೆ ಲೈಂಗಿಕ ದೌರ್ಜನ್ಯ

rayachuru
25/11/2022


Provided by

ರಾಯಚೂರು: ತಾಯಿಯ ಜೊತೆಗೆ ದೇವಸ್ಥಾನಕ್ಕೆ ಪೂಜೆಗೆ ಬಂದಿದ್ದ ಬಾಲಕಿಗೆ ಪೂಜಾರಿಯೋರ್ವ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ರಾಯಚೂರು ಜಿಲ್ಲೆಯ ಜಾಲಹಳ್ಳಿ ವ್ಯಾಪ್ತಿಯಲ್ಲಿ ನಡೆದಿದೆ.

ಬಾಗೂರು ಬಸವೇಶ್ವರ ದೇವಸ್ಥಾನದ ಪೂಜಾರಿ ಅಯ್ಯಪ್ಪ(54) ಎಂಬಾತ ಈ ದುಷ್ಕೃತ್ಯ ನಡೆಸಿದ್ದು,  2—3 ದಿನಗಳ ಹಿಂದೆಯೇ ಘಟನೆ ನಡೆದಿದ್ದು, ಇದೀಗ ತಡವಾಗಿ ಬೆಳಕಿಗೆ ಬಂದಿದೆ.

8 ವರ್ಷದ ಬಾಲಕಿ ತಾಯಿಯ ಜೊತೆಗೆ  ದೇವಸ್ಥಾನಕ್ಕೆ ಪೂಜೆಗೆ ಬಂದಿದ್ದಳು. ಇದೇ ವೇಳೆ ಅಮಾಯಕರ ಧಾರ್ಮಿಕ ಭಾವನೆಗಳನ್ನು ದುರ್ಬಳಕೆ ಮಾಡಿಕೊಂಡಿರುವ ಪೂಜಾರಿ, ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

ವಿಶೇಷ ಪೂಜೆ ಮಾಡಿಸುವ ನೆಪದಲ್ಲಿ ದೇವಸ್ಥಾನದಲ್ಲಿ ರಾತ್ರಿ ಹೊತ್ತಿನಲ್ಲಿ ತಾಯಿ ಮಗಳನ್ನು ಉಳಿದುಕೊಳ್ಳುವಂತೆ ಮಾಡಿದ್ದ ಪೂಜಾರಿ,  ರಾತ್ರಿ ವೇಳೆ ಬಾಲಕಿಯ ಮೇಲೆ ಲೈಂಗಿಕ ಹಲ್ಲೆ ನಡೆಸಿದ್ದಾನೆ. ಬೆಳಗ್ಗೆ ನಡೆದ ಘಟನೆಯನ್ನು ಬಾಲಕಿಯು ತಾಯಿಯ ಬಳಿ ಹೇಳಿಕೊಂಡಿದ್ದಳು.

ಘಟನೆ ಸಂಬಂಧ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ