ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಬಾಲಕಿ ಆತ್ಮಹತ್ಯೆಗೆ ಶರಣು!

ಉತ್ತರ ಪ್ರದೇಶ: ಎರಡು ವಾರಗಳ ಹಿಂದೆ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಬಾಲಕಿ ಸಮಾಜವನ್ನು ಎದುರಿಸಲಾಗದೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮರಾಜ್ಯ ಉತ್ತರ ಪ್ರದೇಶದ ಬುಲಂದ್ ಶಹರ್ ನಲ್ಲಿ ನಡೆದಿದೆ.
ಬಾಲಕಿಯ ಮೇಲೆ ಮೂವರು ಅಪ್ರಾಪ್ತರು ಅತ್ಯಾಚಾರ ನಡೆಸಿದ್ದರು. ಈ ಸಂಬಂಧ ಬಾಲಕಿಯ ತಾಯಿ ದೂರು ನೀಡಿದ ಬಳಿಕ ಉತ್ತರ ಪ್ರದೇಶ ಪೊಲೀಸರು ಮೂವರು ಆರೋಪಿಗಳ ಪೈಕಿ ಒಬ್ಬನನ್ನು ಮಾತ್ರವೇ ಬಂಧಿಸಿದ್ದರು.
ಜೂನ್ 28ರಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ , ಬಾಲಕಿ ಹಾಗೂ ಆಕೆಯ ಮೂರು ವರ್ಷದ ತಮ್ಮ ವರಾಂಡದಲ್ಲಿ ಕುಳಿತಿದ್ದಳು. ಆಕೆಯ ತಾಯಿ ಕೆಲಸಕ್ಕೆ ಹೋಗಿದ್ದರು. ಆಗ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ವಿಪಿನ್ ಆಕೆಯ ಮನೆ ಮುಂದೆ ಬೈಕ್ ನಿಲ್ಲಿಸಿದ್ದ. ಆತ ವಿಶಾಲ್ ಹಾಗೂ ಹೇಮಂತ್ ಜತೆ ಅಲ್ಲಿಗೆ ಬಂದಿದ್ದ. ಬಾಲಕಿಯ ತಮ್ಮನ ಬಳಿ ಬೈಕ್ ನಲ್ಲಿ ಒಂದು ರೈಡ್ ಹೋಗಿ ಬರೋಣ ಅಕ್ಕನನ್ನು ಕರೆದುಕೊಂಡು ಬಾ ಎಂದು ಹೇಳಿ ಬೈಕ್ ನಲ್ಲಿ ಕೂರಿಸಿಕೊಂಡು ಹೋಗಿದ್ದಾರೆ. ಬಳಿಕ ನಿರ್ಜನ ಪ್ರದೇಶಕ್ಕೆ ಕರೆದೊಯ್ದರು, ಅಲ್ಲಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಲಾಗಿದೆ.
ಅಲ್ಲಿಂದ ನೇಹಾ ಚಿಕ್ಕಮ್ಮನ ಮನೆಗೆ ಹೋಗಿದ್ದಾಳೆ. ಎರಡು ದಿನಗಳ ಕಾಲ ಯಾರೊಂದಿಗೂ ಮಾತನಾಡುತ್ತಿರಲಿಲ್ಲ. ಬಳಿಕ ಮನೆಯವರು ತುಂಬಾ ವಿಚಾರಿಸಿದಾಗ ಆಕೆ ತನಗಾದ ನೋವಿನ ಕುರಿತು ಹೇಳಿಕೊಂಡಿದ್ದಾಳೆ. ಬಳಿಕ ಆಕೆಯ ಮನೆಗೆ ಕರೆದುಕೊಂಡು ಬಂದು ಕೂಡಲೇ ಪೊಲೀಸ್ ಠಾಣೆಗೆ ಹೋಗಿ ದೂರು ದಾಖಲಿಸಲಾಯಿತು. ಪ್ರಕರಣದಲ್ಲಿ ಮೂವರು ಹುಡುಗರನ್ನು ಆರೋಪಿಗಳೆಂದು ಹೆಸರಿಸಿದ್ದಾರೆ.
ಜುಲೈ 2ರಂದು ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ಎರಡು ವಾರಗಳ ನಂತರ ಜುಲೈ 15ರಂದು ಬಾಲಕಿಯ ತಾಯಿ ಕೆಲಸದಿಂದ ಹಿಂದಿರುಗಿದಾಗ ಬಾಗಿಲು ಒಳಗಿನಿಂದ ಲಾಕ್ ಆಗಿರುವುದನ್ನು ಗಮನಿಸಿದರು. ತಾಯಿ ಪಕ್ಕದ ಮನೆಯ ಛಾವಣಿಯಿಂದ ಮನೆಯೊಳಗೆ ಬಂದಾಗ ಮಗಳು ನೇಣು ಹಾಕಿಕೊಂಡಿರುವುದನ್ನು ನೋಡಿ ಆಘಾತಕ್ಕೊಳಗಾಗಿದ್ದರು.
ಈ ಘಟನೆ ನಡೆದಾಗಿನಿಂದ ಆಕೆ ಮಾನಸಿಕ ಒತ್ತಡದಲ್ಲಿದ್ದಳು, ಮನೆಯೊಳಗೇ ಇರುತ್ತಿದ್ದಳು, ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ. ಪ್ರಕರಣದ ತನಿಖೆ ನಡೆಯುತ್ತಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: