ಕಡಿಮೆ ಶಿಕ್ಷೆ ನೀಡಿ: ಕೋರ್ಟ್ ಹಾಲ್ ನಲ್ಲಿ ಕಣ್ಣೀರು ಹಾಕಿ ಬೇಡಿಕೊಂಡ ಪ್ರಜ್ವಲ್ ರೇವಣ್ಣ

ಬೆಂಗಳೂರು: ಅತ್ಯಾಚಾರ ಪ್ರಕರಣ ಮತ್ತು ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ದೋಷಿಯಾಗಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಕೋರ್ಟ್ ಹಾಲ್ ನಲ್ಲಿ ಕಣ್ಣೀರು ಹಾಕುತ್ತಾ ಬೇಡಿಕೊಂಡ ಘಟನೆ ನಡೆದಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇದೀಗ ಶಿಕ್ಷೆಯ ಪ್ರಮಾಣ ಪ್ರಕಟಿಸಲು ವಾದ-ಪ್ರತಿ ವಾದ ಆಲಿಸಿದೆ. ವಿಚಾರಣೆ ವೇಳೆ ನ್ಯಾಯಾಧೀಶರು ಪ್ರಜ್ವಲ್ ರೇವಣ್ಣ ಅವರನ್ನುಕೆಲ ಪ್ರಶ್ನೆಗಳನ್ನು ಕೇಳಿದ್ದು, ಈ ವೇಳೆ ಬಿಕ್ಕಿ ಬಿಕ್ಕಿ ಅಳುತ್ತಲೇ ಪ್ರಜ್ವಲ್ ರೇವಣ್ಣ ಉತ್ತರಿಸಿದರು.
ಆರಂಭದಲ್ಲಿ ಇಂಗ್ಲಿಷ್ ನಲ್ಲಿಯೇ ಮಾತು ಆರಂಭಿಸಿದ ಪ್ರಜ್ವಲ್ ರೇವಣ್ಣ, ನಂತರ ಕಣ್ಣೀರಿಡುತ್ತಾ ಕನ್ನಡದಲ್ಲಿ ಮಾತು ಮುಂದುವರಿಸಿದರು. ನಾನು ಮೆಕ್ಯಾನಿಕಲ್ ಎಂಜಿನಿಯರಿಂಗ್ ಓದಿದ್ದೇನೆ. ನಾನು ಮೆರಿಟ್ ವಿದ್ಯಾರ್ಥಿ.. ಬೇಕಿದ್ದರೆ ನನ್ನ ಹಿನ್ನೆಲೆ ನೋಡಿ.. ಎಂದು ಹೇಳಿದ್ದಾರೆ.
‘ನಾನು ಹಲವು ಮಹಿಳೆಯರೊಂದಿಗೆ ಇಂತಹ ಕೃತ್ಯ ನಡೆಸಿದ್ದೇನೆ ಎಂದು ಆರೋಪಿಸಿದ್ದಾರೆ. ನಾನು ಸಂಸದನಾಗಿದ್ದ ವೇಳೆ ಯಾರೂ ಇಂತಹ ಆರೋಪ ಮಾಡಿರಲಿಲ್ಲ. ನಾನು ರೇಪ್ ಮಾಡಿದ್ದರೆ ಅವರು ಯಾರಿಗೂ ಏಕೆ ಹೇಳಿರಲಿಲ್ಲ? ಚುನಾವಣೆ ಸಮಯದಲ್ಲಿಯೇ ಅವರು ಯಾಕೆ ಹಾಗೆ ಮಾಡಿದ್ದಾರೆ? ಪೊಲೀಸರೇ ಈ ಕೆಲಸ ಮಾಡಿದ್ದಾರೆ. ಚುನಾವಣೆ ವೇಳೆ ಈ ರೀತಿ ಮಾಡಿದ್ದಾರೆ ಎಂದರು.
ಅಂತೆಯೇ ಕಳೆದ 6 ತಿಂಗಳುಗಳಿಂದ ತಂದೆ ತಾಯಿಯನ್ನು ನೋಡಿಲ್ಲ. ನ್ಯಾಯಾಲಯ ಏನೇ ತೀರ್ಮಾನ ಕೈಗೊಂಡರೂ ಅದನ್ನು ಒಪ್ಪಿಕೊಳ್ಳುತ್ತೇನೆ. ದಯಮಾಡಿ ನನಗೆ ಕನಿಷ್ಠ ಶಿಕ್ಷೆ ಕೊಡಿ ಎಂದು ಪ್ರಜ್ವಲ್ ರೇವಣ್ಣ ನ್ಯಾಯಾಲಯವನ್ನು ಬೇಡಿಕೊಂಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: