ಡಿ.ಕೆ.ಶಿವಕುಮಾರ್ ಗೆ ಅಧಿಕಾರ ಬಿಟ್ಟುಕೊಡಿ: ಸಿದ್ದರಾಮಯ್ಯ ಎದುರೇ ಹೇಳಿಕೆ ನೀಡಿದ ಸ್ವಾಮೀಜಿ

ಬೆಂಗಳೂರು: ಕೆಂಪೇಗೌಡ ಜಯಂತಿ ಕಾರ್ಯಕ್ರಮದ ವೇದಿಕೆಯನ್ನು ಚಂದ್ರಶೇಖರನಾಥ್ ಸ್ವಾಮೀಜಿ ರಾಜಕೀಯ ಹೇಳಿಕೆಗೆ ಬಳಸಿಕೊಂಡಿರುವ ಘಟನೆ ನಡೆದಿದ್ದು, ಸಿಎಂ ಸಿದ್ದರಾಮಯ್ಯ ಅವರ ಎದುರೇ, ಡಿ.ಕೆ.ಶಿವಕುಮಾರ್ ಗೆ ಅಧಿಕಾರ ಬಿಟ್ಟುಕೊಡುವಂತೆ ಹೇಳಿಕೆ ನೀಡಿರುವುದು ಗೊಂದಲಕ್ಕೆ ಕಾರಣವಾಗಿದೆ.
ಕೆಂಪೇಗೌಡ ಜಯಂತಿ ಆಚರಣೆ ವೇದಿಕೆಯಲ್ಲಿ ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು. ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಮಾತನಾಡಿ, ಕೆಂಪೇಗೌಡರ ಬಗ್ಗೆ ಮಾತನಾಡುವ ಬದಲು ಡಿ.ಕೆ.ಶಿವಕುಮಾರ್ ಪರ ಬ್ಯಾಟಿಂಗ್ ಆರಂಭಿಸಿದ್ದು, ಸಿದ್ದರಾಮಯ್ಯನವರು ಡಿ.ಕೆ.ಶಿವಕುಮಾರ್ ಅವರಿಗೆ ಅಧಿಕಾರ ಬಿಟ್ಟುಕೊಡಬೇಕು ಎಂದು ಹೇಳಿದ್ದಾರೆ.
ಇನ್ನೂ ಸ್ವಾಮೀಜಿಯ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಸಿಎಂ ಬದಲಾವಣೆ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ಹೇಳಿದರು.
ಇನ್ನೂ ಸ್ವಾಮೀಜಿಯ ಹೇಳಿಕೆಯ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಇಂದು ದೆಹಲಿಗೆ ತೆರಳಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97