ನಾವು ಕೊಟ್ಟಂತಹ ಪ್ರಣಾಳಿಕೆಯಲ್ಲಿ ಹಲವನ್ನು 24 ಗಂಟೆಯಲ್ಲೇ ಜಾರಿ ಮಾಡುತ್ತೇವೆ: ಯಡಿಯೂರಪ್ಪ

ಚಾಮರಾಜನಗರ: ಉಚಿತ ಹಾಲು, ಉಚಿತ ಸಿರಿಧಾನ್ಯ, ಮಹಿಳಾ ಕಾರ್ಮಿಕರಿಗೆ ಉಚಿತ ಬಸ್ ಸೇವೆಯನ್ನು ಅಧಿಕಾರಕ್ಕೆ ಬಂದ 24 ತಾಸಿನಲ್ಲಿ ಜಾರಿ ಮಾಡುತ್ತೇವೆಂದು ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ವಾಗ್ದಾನ ಮಾಡಿದರು.
ಹನೂರಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಪ್ರೀತನ್ ನಾಗಪ್ಪ ಪರ ಬಹಿರಂಗ ಸಮಾವೇಶದಲ್ಲಿ ಅವರು ಮಾತನಾಡಿ, ನಾವು ಕೊಟ್ಟಂತಹ ಪ್ರಣಾಳಿಕೆಯಲ್ಲಿ ಹಲವನ್ನು 24 ಗಂಟೆಯಲ್ಲೇ ಜಾರಿ ಮಾಡುತ್ತೇವೆ, ಕೇಂದ್ರ ಮತ್ತು ರಾಜ್ಯ ಸರ್ಕಾರ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದು ನಿಮ್ಮ ಸಹಕಾರ, ಬೆಂಬಲ ಇರಬೇಕು ಎಂದು ಮನವಿ ಮಾಡಿದರು.
ಅಮಿತ್ ಶಾ ಬಂದಿರುವುದು ನಮಗೆ ಆನೆ ಬಲ ಬಂದಂತಿದ್ದು ಈ ಬಾರಿ ರಾಜ್ಯದಲ್ಲಿ 125 ಸ್ಥಾನ ಗೆದ್ದು ಸರ್ಕಾರ ರಚನೆ ಮಾಡುತ್ತೇವೆ, ಹನೂರಿನಲ್ಲಿ 20 ಸಾವಿರ ಮತಗಳ ಅಂತರದಿಂದ ಗೆಲ್ಲುವ ವಾತಾವರಣ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಮಾತನಾಡಿ ಬಿಜೆಪಿ ಅಭ್ಯರ್ಥಿಗೆ ಮತ ನೀಡಿ, ಮೋದಿ ನಾಯಕತ್ವದಲ್ಲಿ “ಡಬಲ್ ಇಂಜಿನ್ ಸರ್ಕಾರ” ಅಧಿಕಾರಕ್ಕೆ ಬರುವಂತೆ ಮತ ಚಲಾಯಿಸುವಂತೆ ಜನರನ್ನು ಒತ್ತಾಯಿಸಿದರು.
ಬಿಜೆಪಿ ಸರ್ಕಾರವು ಶೇ.4 ರಷ್ಟಿದ್ದ ಮುಸ್ಲಿಂ ಮೀಸಲಾತಿಯನ್ನು ರದ್ದುಗೊಳಿಸಿದ್ದು, ಒಕ್ಕಲಿಗರು, ಲಿಂಗಾಯತರು ಮತ್ತು ಎಸ್‌ಸಿ, ಎಸ್‌ಟಿಗಳ ಕೋಟಾವನ್ನು ಹೆಚ್ಚಿಸಿದೆ ಎಂದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮತ್ತೆ ಮುಸ್ಲಿಮರ ಮೀಸಲಾತಿ ಜಾರಿಗೆ ತರುತ್ತಾರೆ. ಮತ್ತೆ ಮುಸ್ಲಿಮರಿಗೆ ಶೇ. 4 ರಷ್ಟು ಕೋಟಾ ಬೇಕಾ ಎಂದು ಮತದಾರರನ್ನು ಕೇಳಿದರು.
ಬಿಜೆಪಿ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಎತ್ತಿ ಹಿಡಿದ ಶಾ, ಕರ್ನಾಟಕದಲ್ಲಿ ಡಬಲ್ ಇಂಜಿನ್ ಸರ್ಕಾರ ಅಧಿಕಾರಕ್ಕೆ ಬರುವುದನ್ನು ಖಚಿತಪಡಿಸಿದರೆ ಮೋದಿ ಜಿ ಮತ್ತೊಮ್ಮೆ 2024 ರಲ್ಲಿ ಪ್ರಧಾನಿಯಾಗುತ್ತಾರೆ ಎಂದು ಹೇಳಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw