“ಗ್ಲೋಬಲ್ ಮಿಸೆಸ್ ಇಂಡಿಯಾ ಇಂಟರ್‌ನ್ಯಾಷನಲ್‌ ಯೂನಿವರ್ಸ್ – 2023’ ಕಿರೀಟ ಮುಡಿಗೇರಿಸಿದ ಮಂಗಳೂರಿನ ಶಮಾ ವಾಜಿದ್

shama vaajid
15/07/2023

ನವದೆಹಲಿಯಲ್ಲಿ ಗ್ಲೋಬಲ್ ಇಂಡಿಯಾ ಎಂಟರ್‌ ಟೈನ್‌ ಮೆಂಟ್‌ ಪ್ರೊಡಕ್ಷನ್ಸ್ ಆಯೋಜಿಸಿದ ಸ್ಪರ್ಧೆಯಲ್ಲಿ ಮಂಗಳೂರಿನ ಶಮಾ ವಾಜಿದ್, “ಗ್ಲೋಬಲ್ ಮಿಸೆಸ್ ಇಂಡಿಯಾ ಇಂಟರ್‌ನ್ಯಾಷನಲ್‌ ಯೂನಿವರ್ಸ್ – 2023’ ಕಿರೀಟವನ್ನು ಮುಡಿಗೇರಿಸಿದ್ದಾರೆ.

ಈ ಮೂಲಕ ಅವರು 2024ರ ಗ್ಲೋಬಲ್ ಮಿಸೆಸ್ ಯೂನಿವರ್ಸ್ ಸ್ಪರ್ಧೆಗೆ ಭಾರತವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ.

ದೇಶದ 22ಕ್ಕೂ ಅಧಿಕ ರಾಜ್ಯಗಳಲ್ಲಿ ಸ್ಪರ್ಧೆಯ ಆಡಿಷನ್‌ ನಡೆದಿದೆ. ಸಾವಿರಾರು ಮಹಿಳೆಯರಲ್ಲಿ ಶಮಾ ವಾಜಿದ್ ನವದೆಹಲಿಯಲ್ಲಿ ನಡೆದ ಗ್ರ್ಯಾಂಡ್ ಫಿನಾಲೆಗೆ ತಲುಪಿದ ಟಾಪ್ 40ರಲ್ಲಿ ಒಬ್ಬರಾಗಿದ್ದರು. ಎಲ್ಲಾ ಫೈನಲಿಸ್ಟ್‌ಗಳು 5 ದಿನಗಳ ಕಾಲ ಮಾರ್ಗದರ್ಶಕರಿಂದ ಕ್ಯಾಟ್‌ವಾಕ್, ಗ್ರೂಮಿಂಗ್, ಕೊರಿಯೋಗ್ರಫಿ, ಇಮೇಜ್ ಕನ್ಸಲ್ಟಿಂಗ್, ಆತಂಕ ನಿರ್ವಹಣೆ, ದೈಹಿಕ ಫಿಟ್‌ನೆಸ್ ಇತ್ಯಾದಿಗಳ ಉತ್ತಮ ಅಂಶಗಳಲ್ಲಿ ಕಠಿಣ ತರಬೇತಿಯನ್ನು ಪಡೆದಿದ್ದರು.

ಕರ್ನಾಟಕವನ್ನು ಪ್ರತಿನಿಧಿಸಿದ್ದ ಶಾಮಾ ವಾಜಿದ್ ಫೂಲ್ ರೌಂಡ್, ಎಕ್ನಿಕ್ ರೌಂಡ್, ಟ್ಯಾಲೆಂಟ್ ರೌಂಡ್ ಮತ್ತು ಫಾರ್ಮಲ್ ಸುತ್ತುಗಳಂತಹ ವಿವಿಧ ಸುತ್ತುಗಳಲ್ಲಿ ತಮ್ಮ ಅತ್ಯುತ್ತಮ ಪ್ರದರ್ಶನ ನೀಡಿ ಅಗ್ರ 10 ಫೈನಲಿಸ್ಟ್ ಗಳಲ್ಲಿ ಸ್ಥಾನ ಗಿಟ್ಟಿಸಿಕೊಂಡರು. ಅಂತಿಮವಾಗಿ ಗ್ಲೋಬಲ್ ಮಿಸೆಸ್ ಇಂಡಿಯಾ ಇಂಟರ್ ನ್ಯಾಷನಲ್ ಯೂನಿವರ್ಸ್ 2023ರ ಕಿರೀಟವನ್ನು ಬಾಲಿವುಡ್ ಸೆಲೆಬ್ರಿಟಿ ಮಲೈಕಾ ಅರೋರಾ ಅವರಿಂದ ಮುಡಿಗೇರಿಸಿದರು.

ಈ ಸ್ಪರ್ಧೆ ವಿವಾಹಿತ ಮಹಿಳೆಯರಿಗೆ ಮಾತ್ರವಾಗಿದ್ದು, ಶಮಾ ವಾಜಿದ್ ಗೆ 14 ತಿಂಗಳ ಗಂಡು ಮಗುವಿದೆ.

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version