ಆಟೋಗೆ ಟಚ್ ಆದ ಕಾರು: ಗೋವಾ ಮಾಜಿ ಶಾಸಕನ ಬರ್ಬರ ಹತ್ಯೆ!

ಬೆಳಗಾವಿ: ಆಟೋಗೆ ಕಾರು ಟಚ್ ಆದ ವಿಚಾರಕ್ಕೆ ಸಂಬಂಧಿಸಿದಂತೆ ಗೋವಾ ಮಾಜಿ ಶಾಸಕ ಲಾವೂ ಮಾಮಲೇದಾರ್ ಅವರನ್ನು ಆಟೋ ಚಾಲಕನೊಬ್ಬ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಶನಿವಾರ ನಡೆದಿದೆ.
ಬೆಳಗಾವಿಯ ಖಡೇಬಜಾರ್ ನಲ್ಲಿ ಇರೋ ಶ್ರೀನಿವಾಸ ಲಾಡ್ಜ್ ಮುಂದೆ ಈ ಘಟನೆ ನಡೆದಿದೆ. ಲಾವೋ ಮಾಮಲೇದಾರ್ ಅವರು ಇಂದು ಬೆಳಗಾವಿಗೆ ಆಗಮಿಸಿದ್ದರು. ಈ ವೇಳೆ ಬೆಳಗಾವಿಯ ಖಡೇಬಜಾರ್ ಬಳಿ ಆಟೋಗೆ ಮಾಜಿ ಶಾಸಕರ ಕಾರು ಟಚ್ ಆಗಿದೆ ಎನ್ನಲಾಗಿದೆ.
ಆಟೋ ಚಾಲಕ ಎಷ್ಟೇ ಕೂಗಾಡಿದರೂ ಕಾರು ನಿಲ್ಲಿಸದ ಲಾವೋ ಮಾಮಲೇದಾರ್ ನೇರವಾಗಿ ಶ್ರೀನಿವಾಸ ಲಾಡ್ಜ್ ಬಳಿ ಕಾರಿನಿಂದ ಇಳಿದಿದ್ದಾರೆ. ಈ ವೇಳೆ ಸ್ಥಳಕ್ಕೆ ಆಗಮಿಸಿದ ಆಟೋ ಚಾಲಕ ಆರೋಪಿ ಮುಜಾಹಿದ್ ಶಕೀಲ್ ಸನದಿ ಆಕ್ರೋಶದಿಂದ ಲಾವೋ ಮಾಮಲೇದಾರ್ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ. ಈ ವೇಳೆ ಸಾರ್ವಜನಿಕರು, ಲಾಡ್ಜ್ ನ ಸಿಬ್ಬಂದಿ ಜಗಳ ಬಿಡಿಸಿದ್ದಾರೆ.
ಆಟೋ ಚಾಲಕನಿಂದ ಹಲ್ಲೆಗೊಳಗಾದ ಲಾವೋ ಮಾಮಲೇದಾರ್ ತಾವು ತಂಗಿದ್ದ ಲಾಡ್ಜ್ ಗೆ ಹೋಗುವಾಗ ಮೆಟ್ಟಿಲು ಏರಲು ಆಗದೇ ಕುಸಿದು ಬಿದ್ದು ಮೃತಟ್ಟಿದ್ದಾರೆ. ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಘಿದೆ.
ಸದ್ಯ ಆಟೋ ಚಾಲಕ ಮುಜಾಹಿದ್ ಶಕೀಲ್ ಸನದಿಯನ್ನು ಪೊಲೀಸರು ಬಂಧಿಸಿದ್ದಾರೆ. ಸ್ಥಳಕ್ಕೆ ಡಿಸಿಪಿ ರೋಹನ್ ಜಗದೀಶ್ ಹಾಗೂ ಕಮಿಷನರ್ ಭೇಟಿ, ಪರಿಶೀಲನೆ ನಡೆಸಿದ್ದು, ಮಾಜಿ ಶಾಸಕ ಲಾವೂ ಮಾಮಲೇದಾರ್ ಮೃತದೇಹವನ್ನು ಬೆಳಗಾವಿ ಬಿಮ್ಸ್ಗೆ ರವಾನೆ ಮಾಡಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/HEkqDgrW2BlJLad5kZ1DX7