“ಗೋಹತ್ಯೆ ನಿಷೇಧಕ್ಕೆ ಮುಂದಿನ ವಿಧಾನ ಮಂಡಲ ಅಧಿವೇಶನದಲ್ಲಿ ಮಸೂದೆ ಮಂಡನೆ” - Mahanayaka
2:49 PM Thursday 11 - December 2025

“ಗೋಹತ್ಯೆ ನಿಷೇಧಕ್ಕೆ ಮುಂದಿನ ವಿಧಾನ ಮಂಡಲ ಅಧಿವೇಶನದಲ್ಲಿ ಮಸೂದೆ ಮಂಡನೆ”

17/11/2020

ವಿಜಯಪುರ: ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತರಲು ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿ ಮಸೂದೆ ಮಂಡಿಸುವುದಾಗಿ ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ.

 ಇಲ್ಲಿನ ಕೆಎಂಎಫ್ ಕಚೇರಿಯಲ್ಲಿ ಕರೆದ  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಗೋಹತ್ಯೆ ನಿಷೇಧ ಮಾಡಿದಲ್ಲಿ ಉಂಟಾಗುವ ಸಾಧಕ, ಬಾಧಕಗಳ ಕುರಿತು ಅಧ್ಯಯನ ನಡೆಸಲು ಇಲಾಖೆ ಆಯುಕ್ತರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ ಎಂದರು.

 ಸಮಿತಿ ಈಗಾಗಲೇ ಗೋಹತ್ಯೆ ನಿಷೇಧಿಸಿರುವ, ಉತ್ತರ ಪ್ರದೇಶ, ಗುಜರಾತ್ ರಾಜ್ಯಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಿ ವರದಿ ನೀಡಲಿದೆ. ಈ ವರದಿ ಬರುತ್ತಲೇ ಪರಿಶೀಲನೆ ನಡೆಸಿ, ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುತ್ತದೆ ಎಂದು ಅವರು ತಿಳಿಸಿದರು.

ಇತ್ತೀಚಿನ ಸುದ್ದಿ