ಚಿನ್ನದ ಬೆಲೆ ಸ್ಥಿರ, ಬೆಳ್ಳಿಯ ಬೆಲೆ ಏರಿಕೆ: ಹೀಗಿದೆ ಇಂದಿನ ಚಿನ್ನ, ಬೆಳ್ಳಿ ದರ..!

gold price
22/04/2024

ಬೆಂಗಳೂರು:  ಆಭರಣ ಪ್ರಿಯರಿಗೆ ಚಿನ್ನದ ಬೆಲೆ ಏರಿಕೆಯಿಂದ ಆತಂಕ ಸೃಷ್ಟಿಯಾಗಿದೆ. ಕಳೆದೆರಡು ದಿನಗಳಿಂದ ಚಿನ್ನದ ಬೆಲೆ ಕೊಂಚ ಇಳಿಕೆಯಾಗಿದ್ದರೂ, ಹೇಳಿಕೊಳ್ಳುವಂತಹ ವ್ಯತ್ಯಾಸವೇನೂ ಆಗದ ಕಾರಣ, ಅಷ್ಟೊಂದು ಖುಷಿಪಡುವಂತಹ ವಿಚಾರ ಆಗಿರಲಿಲ್ಲ. ಶನಿವಾರ ಸ್ಥಿರವಾಗಿದ್ದ ಚಿನ್ನದ ದರ ಭಾನುವಾರ ತುಸು ಇಳಿಕೆಯಾಗಿತ್ತು. ಇದೀಗ ಸೋಮವಾರ (ಏಪ್ರಿಲ್‌ 22) ಮತ್ತೆ ಸ್ಥಿರವಾಗಿದೆ. ಆದರೆ ಬೆಳ್ಳಿ ದರ ಹೆಚ್ಚಳ ನಿಲ್ಲುತ್ತಿಲ್ಲ. ದಿನೇ ದಿನೇ ಕೊಂಚ ಕೊಂಚವಾಗಿ ಏರುತ್ತಿದೆ.  ಕರ್ನಾಟಕ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಇಂದು ಚಿನ್ನ, ಬೆಳ್ಳಿ ದರ ಎಷ್ಟಿದೆ ? ಇಲ್ಲಿ ವಿವರ ನೀಡಲಾಗಿದೆ.

22 ಕ್ಯಾರೆಟ್‌ ಚಿನ್ನದ ಬೆಲೆ:

ಇಂದು 1 ಗ್ರಾಂ ಚಿನ್ನಕ್ಕೆ 6,805 ರೂ. ಇದೆ. 8 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 54,440 ರೂ. ನೀಡಬೇಕು. 10 ಗ್ರಾಂ ಚಿನ್ನಕ್ಕೆ 68,050 ರೂ ಇದೆ. 100 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 6,80,500 ರೂ. ನೀಡಬೇಕು.

24 ಕ್ಯಾರೆಟ್‌ ಚಿನ್ನದ ಬೆಲೆ:

24 ಕ್ಯಾರೆಟ್‌ ಚಿನ್ನಕ್ಕೆ 1 ಗ್ರಾಂಗೆ 7,424 ರೂ. ಇದೆ. 8 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 59,392 ರೂ. ನೀಡಬೇಕು. ನಿನ್ನೆ 7,304 ರೂ. ಇದ್ದು ಈ ದರಕ್ಕೆ ಹೋಲಿಸಿದರೆ 264 ರೂ. ಕಡಿಮೆಯಾಗಿದೆ. ಇಂದು 10 ಗ್ರಾಂ ಚಿನ್ನಕ್ಕೆ 74,240 ನೀಡಬೇಕು. 100 ಗ್ರಾಂ ಚಿನ್ನದ ಬೆಲೆ 7,42,400 ರೂ. ಇದೆ.

ಕರ್ನಾಟಕದಲ್ಲಿ ಚಿನ್ನದ ಬೆಲೆ (10 ಗ್ರಾಂ):

ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರದಲ್ಲಿ ಇಂದು ಚಿನ್ನದ ಬೆಲೆ 22 ಕ್ಯಾರೆಟ್‌ಗೆ 68,050 ರೂ. ಹಾಗೂ 24 ಕ್ಯಾರೆಟ್‌ ಚಿನ್ನದ ಬೆಲೆ 74,240 ರೂ. ಇದೆ. ಮೈಸೂರು, ಮಂಗಳೂರು, ಬಳ್ಳಾರಿ, ದಾವಣಗೆರೆ ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಇದೇ ಬೆಲೆ ಇರಲಿದೆ. ಆದರೆ ಮಜೂರಿ, ಇತರೆ ಶುಲ್ಕ ಹಾಗೂ ಇನ್ನಿತರ ದರಗಳು ವಿವಿಧ ನಗರಗಳಲ್ಲಿ ವ್ಯತ್ಯಾಸವಿರಬಹುದು.

ಹೊರ ರಾಜ್ಯಗಳ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ (10 ಗ್ರಾಂ):

ಚೆನ್ನೈನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 68,850 ರೂ. ಹಾಗೂ 24 ಕ್ಯಾರೆಟ್‌ ಚಿನ್ನದ ಬೆಲೆ 75,110 ರೂ. ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 68,050 ರೂ. ಹಾಗೂ 24 ಕ್ಯಾರೆಟ್‌ ಚಿನ್ನದ ಬೆಲೆ 74,240 ರೂ. ಇದೆ. ದೆಹಲಿಯಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 68,210 ರೂ. ಹಾಗೂ 24 ಕ್ಯಾರೆಟ್‌ ಚಿನ್ನದ ಬೆಲೆ 74,390 ರೂ. ಇದೆ. ಕೊಲ್ಕತ್ತಾದಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 68,050 ರೂ. ಹಾಗೂ 24 ಕ್ಯಾರೆಟ್‌ ಚಿನ್ನದ ಬೆಲೆ 74,240 ರೂ. ಇದೆ. ಹೈದರಾಬಾದ್‌ನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 68,050 ರೂ. ಹಾಗೂ 24 ಕ್ಯಾರೆಟ್‌ ಚಿನ್ನದ ಬೆಲೆ 74,240 ರೂ. ಇದೆ. ಕೇರಳದಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 68,050 ರೂ. ಹಾಗೂ 24 ಕ್ಯಾರೆಟ್‌ ಚಿನ್ನದ ಬೆಲೆ 74,240 ರೂ. ಇದೆ. ವಡೋಧರಾದಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 68,110 ರೂ. ಹಾಗೂ 24 ಕ್ಯಾರೆಟ್‌ ಚಿನ್ನದ ಬೆಲೆ 74,290 ರೂ. ಇದೆ.

ಬೆಳ್ಳಿ ದರ:

ಬೆಳ್ಳಿ ಬೆಲೆ ಕೊಂಚ ಏರಿಕೆಯಾಗಿದೆ. 1 ಗ್ರಾಂಗೆ 86 ರೂ. 8 ಗ್ರಾಂಗೆ 688 ರೂ. 10 ಗ್ರಾಂಗೆ 860 ರೂ. 100 ಗ್ರಾಂಗೆ 8,600 ರೂ. ಹಾಗೂ 1 ಕಿಲೋಗೆ 86,000 ರೂ. ಬೆಲೆ ನಿಗದಿ ಆಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version