ಹೊಳೆಗೆ ಈಜಲು ಹೋಗಿ ನೀರುಪಾಲಾಗಿದ್ದ ಬಾಲಕನ ಮೃತದೇಹ ಪತ್ತೆ

madavu
16/10/2023

ಸ್ನೇಹಿತರೊಂದಿಗೆ ಹೊಳೆಗೆ ಈಜಲು ಇಳಿದ ವೇಳೆ ನೀರಲ್ಲಿ ಮುಳುಗಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಇಂದು ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಕೆಯ್ಯೂರು ಗ್ರಾಮದ ಎರಕ್ಕಲ ಬಳಿ ನಡೆದಿದೆ.

ಮಾಡಾವು ಕಟ್ಟತ್ತಾರು ನಿವಾಸಿ ಹಂಝ ಹಾಜಿ ಎಂಬವರ ಪುತ್ರ ತಸ್ಲೀಮ್ (17) ಮೃತ ಬಾಲಕ. ಇವರು ಸುಳ್ಯದ ಅರಂತೋಡಿನಲ್ಲಿರುವ ತನ್ನ ಅಜ್ಜಿ ಮನೆಯಲ್ಲಿದ್ದು, ಅಲ್ಲಿಂದ ಪಿಯು ಕಾಲೇಜಿಗೆ ಹೋಗುತ್ತಿದ್ದ. ಕಾಲೇಜಿಗೆ ರಜೆ ಇದ್ದ ಕಾರಣ ಮನೆಗೆ ಬಂದಿದ್ದ. ತಸ್ಲೀಮ್ ರವಿವಾರ ಸಂಜೆ ಸ್ನೇಹಿತರೊಂದಿಗೆ ಎರಕ್ಕಲ ಸಮೀಪದ ಗೌರಿ ಹೊಳೆಗೆ ಈಜಲು ತೆರಳಿದ್ದ ವೇಳೆ ನೀರಲ್ಲಿ ಮುಳುಗಿ ನಾಪತ್ತೆಯಾಗಿದ್ದರು.

ಈ ವಿಷಯ ತಿಳಿಯುತ್ತಲೇ ಸ್ಥಳೀಯರು, ಮುಳುಗು ತಜ್ಞರು ಹುಡುಕಾಡಿದರೂ ಪತ್ತೆಯಾಗಿರಲಿಲ್ಲ. ಇಂದು ಬೆಳಗ್ಗೆ ಮತ್ತೆ ಹುಡುಕಾಟ ಮುಂದುವರಿಸಿದಾಗ ತಸ್ಲೀಮ್ ಈಜಲು ತೆರಳಿದ್ದ ಸ್ಥಳದ ಸನಿಹವೇ ಮೃತದೇಹ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಇತ್ತೀಚಿನ ಸುದ್ದಿ

Exit mobile version