ಉಡುಪಿ ಜಿಲ್ಲೆಯಲ್ಲಿ ಪ್ರಾರ್ಥನೆ, ಧ್ಯಾನದೊಂದಿಗೆ ಗುಡ್ ಫ್ರೈಡೆ ಆಚರಣೆ

ಉಡುಪಿ: ಕ್ರೈಸ್ತ ಸಮುದಾಯದ ಪವಿತ್ರ ದಿನವಾದ ಶುಭ ಶುಕ್ರವಾರವನ್ನು(ಗುಡ್ ಫ್ರೈಡೆ) ಉಡುಪಿ ಜಿಲ್ಲೆಯಾದ್ಯಂತ ಉಪವಾಸ ಧ್ಯಾನ ಹಾಗೂ ಪ್ರಾರ್ಥನೆಯೊಂದಿಗೆ ಆಚರಿಸಲಾಯಿತು. ಜಿಲ್ಲೆಯ ಎಲ್ಲಾ ಚರ್ಚುಗಳಲ್ಲೂ ಬೆಳಗ್ಗಿನಿಂದ ಪ್ರಾರ್ಥನೆ, ಧ್ಯಾನ, ಯೇಸುವಿನ ಶಿಲುಬೆಯ ಹಾದಿಯ ವಾಚನ ಜರುಗಿತು.
ಧರ್ಮ ಪ್ರಾಂತ್ಯದ ಪ್ರಧಾನ ದೇವಾಲಯವಾದ ಮಿಲಾಗ್ರಿಸ್ ಕ್ಯಾಥೆಡ್ರಲ್‌ನಲ್ಲಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂ. ಜೆರಾಲ್ಢ್ ಐಸಾಕ್ ಲೋಬೊ ಪ್ರಾರ್ಥನಾ ವಿಧಿಯನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಚರ್ಚಿನ ಪ್ರಧಾನ ಧರ್ಮಗುರು ವಂ|ವಲೇರಿಯನ್ ಮೆಂಡೊನ್ಸಾ, ಸಹಾಯಕ ಧರ್ಮಗುರು ವಂ. ಜೋಯ್ ಅಂದ್ರಾದೆ, ಪಿಲಾರ್ ಸಭೆಯ ವಂ ಡೆನ್ಜಿಲ್ ಮಾರ್ಟಿಸ್, ವಂ ನಿತೇಶ್ ಡಿ’ಸೋಜ ಉಪಸ್ಥಿತರಿದ್ದರು.
ಜಿಲ್ಲೆಯ ಕೆಲವು ಚರ್ಚುಗಳಲ್ಲಿ ಯೇಸು ಕ್ರಿಸ್ತರ ಬಂಧನ, ಶಿಲುಬೆಯ ಮೇಲೆ ಮರಣವನ್ನಪ್ಪುವ ತನಕದ ಘಟನೆಗಳನ್ನು ಪ್ರಸ್ತುತಪಡಿಸಲಾಯಿತು.
ಚರ್ಚಿನಲ್ಲಿ ಧರ್ಮಗುರುಗಳು ರಕ್ತವರ್ಣದ ಪೂಜಾ ಬಟ್ಟೆಯನ್ನು ಧರಿಸಿ ಯೇಸು ಕ್ರಿಸ್ತನ ಕೊನೆಯ ಗಳಿಗೆಗಳ ವತ್ತಾಂತ ಓದಿದರು. ಬಳಿಕ ಶಿಲುಬೆಯನ್ನು ಮೆರವಣಿಗೆಯಲ್ಲಿ ತಂದು ಭಕ್ತರು ಮುತ್ತಿಟ್ಟು ತಮ್ಮ 40 ದಿನಗಳ ತ್ಯಾಗದ ಉಳಿಕೆಯ ಹಣವನ್ನು ಬಡ ಬಗ್ಗರಿಗಾಗಿ ನೀಡಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw