ಸರ್ಕಾರಿ ಶಾಲೆಯ ಮಕ್ಕಳಿಗೆ ಸಿಹಿಸುದ್ದಿ: ವಾರದಲ್ಲಿ ಮೂರು ದಿನ ರಾಗಿ ಮಾಲ್ಟ್ ವಿತರಣೆ - Mahanayaka
11:53 PM Friday 19 - December 2025

ಸರ್ಕಾರಿ ಶಾಲೆಯ ಮಕ್ಕಳಿಗೆ ಸಿಹಿಸುದ್ದಿ: ವಾರದಲ್ಲಿ ಮೂರು ದಿನ ರಾಗಿ ಮಾಲ್ಟ್ ವಿತರಣೆ

ragi malt
22/02/2024

ಬೆಂಗಳೂರು: ಸರ್ಕಾರಿ ಶಾಲೆಯ ಮಕ್ಕಳ ಮಾನಸಿಕ ದೈಹಿಕ ಆರೋಗ್ಯಕ್ಕಾಗಿ ರಾಗಿ ಮಾಲ್ಟ್ ವಿತರಣೆ ಮಾಡಲು ರಾಜ್ಯಸರ್ಕಾರ ಪ್ರಾರಂಭ ಮಾಡಲಾಗಿದೆಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಇನ್ಮುಂದೆ ವಾರದಲ್ಲಿ ಮೂರು ದಿನ ಹಾಲಿಗೆ ನಿರ್ದಿಷ್ಟ ಪ್ರಮಾಣದ ರಾಗಿ ಮಾಲ್ಟ್ ಮಿಶ್ರಣ ಮಾಡಿ ಕೊಡಲಾಗುತ್ತದೆ. ಉಳಿದ ಎರಡು ದಿನಗಳಲ್ಲಿ ಹಾಲನ್ನು ಮಾತ್ರ ನೀಡಲಾಗುತ್ತದೆ ಎಂಬುದಾಗಿ  ತಿಳಿಸಿದ್ದಾರೆ.

ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಸಾಯಿ ಶ್ಯೂರ್ ರಾಗಿ ಹೆಲ್ತ್ ಮಿಕ್ಸ್ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಿದ್ದರಾಮಯ್ಯ ಅವರು, 2013 ರಲ್ಲಿ ನಮ್ಮ ಸರ್ಕಾರ ಬಂದಾಗ ನಮ್ಮಲ್ಲಿ ಹಾಲು ಉತ್ಪಾದನೆ ಹೆಚ್ಚಾಯಿತು. ಈ ಹೆಚ್ಚುವರಿ ಹಾಲಿನ ಮಾರಾಟ ಮತ್ತು ಹಾಲಿನ ಉಪ ಉತ್ಪನ್ನಗಳನ್ಮೂ ಹೆಚ್ಚುವರಿಯಾಗಿ ಉತ್ಪಾದನೆ ಮಾಡಲು ಸಾಧ್ಯವಿರಲಿಲ್ಲ. ಹೀಗಾಗಿ ಆ ಕೂಡಲೇ ಸರ್ಕಾರಿ ಶಾಲಾ ಮಕ್ಕಳಿಗೆ ವಾರದಲ್ಲಿ ಐದು ದಿನ ಹಾಲು ಕೊಡುವ ಕ್ಷೀರಭಾಗ್ಯ ಯೋಜನೆಯನ್ನು ಆರಂಭಿಸಿದೆ ಎಂದರು.

ಈಗ ಅತ್ಯಂತ ಪೌಷ್ಠಿಕವಾದ ರಾಗಿ ಮಾಲ್ಟ್ ಕೊಡುವ ಕಾರ್ಯಕ್ರಮ ಶುರುವಾಗಿದೆ. ರಾಗಿ ಮಾಲ್ಟ್ ನಿಂದ ಶಾಲಾ ಮಕ್ಕಳ ಮಾನಸಿಕ ಮತ್ತು ದೈಹಿಕ ಆರೋಗ್ಯ ವೃದ್ಧಿಯಾಗುತ್ತದೆ. ಮಕ್ಕಳಿಗೆ ರಕ್ತಹೀನತೆ ಹಾಗೂ ಪೌಷ್ಠಿಕಾಂಶ ಕೊರತೆ ಆಗಬಾರದು. ಮತ್ತು ಮಕ್ಕಳು  ಮಾನಸಿಕವಾಗಿ ಸದೃಡವಾಗಿ ಓದಿನಲ್ಲಿ ಹೆಚ್ಚು ಚುರುಕಾಗುತ್ತಾರೆ. ಉನ್ನತ ಗುಣಮಟ್ಟದ ಶಿಕ್ಷಣ ಪಡೆದುಕೊಳ್ಳುತ್ತಾರೆ. ಶ್ರೀಮಂತರ ಮಕ್ಕಳ ರೀತಿ ಬಡವರ ಮಕ್ಕಳಿಗೂ, ಉತ್ತಮ ಶಿಕ್ಷಣ ದೊರೆಯಬೇಕು ಎಂದು ಅವರು ತಿಳಿಸಿದರು.

ಶಿಕ್ಷಣದಿಂದ ಮಾತ್ರ ಸ್ವಾಭಿಮಾನ ಹೆಚ್ಚಾಗಲು ಸಾಧ್ಯ. ಜ್ಞಾನದ ಬೆಳವಣಿಗೆ ಶಿಕ್ಷಣದಿಂದ ಸಾಧ್ಯ. ಶಿಕ್ಷಣ ಅಂದರೆ ಕೇವಲ ಓದು, ಬರಹ ಕಲಿಸುವುದಲ್ಲ. ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವ ವೈಚಾರಿಕತೆಯುಳ್ಳ ಶಿಕ್ಷಣ ಅಗತ್ಯ. ಉನ್ನತ ಶಿಕ್ಷಣ ಪಡೆದ ವೈದ್ಯರು, ಎಂಜಿನಿಯರ್ ಗಳೂ ಈಗ ಮೌಡ್ಯಕ್ಕೆ ಜೋತು ಬಿದ್ದಿದ್ದಾರೆ. ಬಸವಾದಿ ಶರಣರು ಮೌಡ್ಯಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ್ದರು. ವೈಚಾರಿಕ ಶಿಕ್ಷಣದಿಂದ ಮಾತ್ರ ಮೌಡ್ಯಮುಕ್ತ ಸಮಾಜ ನಿರ್ಮಾಣವಾಗಲು ಸಾಧ್ಯ ಎಂದರು.

2023-24ನೇ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಬಹುಪೌಷ್ಠಿಕಾಂಶವುಳ್ಳ ಸಾಯಿ ಶ್ಯೂರ್ ರಾಗಿ ಮಾಲ್ಟ್ ಹೆಲ್ತ್ ಮಿಕ್ಸ್ ವಿತರಿಸುವ ಕಾರ್ಯಕ್ರಮದಲ್ಲಿ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಸೇರಿ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

 

ಇತ್ತೀಚಿನ ಸುದ್ದಿ