6:07 PM Saturday 20 - September 2025

ಗುಡ್ ನ್ಯೂಸ್: ಸೆ.22ರಿಂದ ನಂದಿನಿ ಉತ್ಪನ್ನಗಳ ದರ ಇಳಿಕೆ

nandini
20/09/2025

ಬೆಂಗಳೂರು: ಕೇಂದ್ರ ಸರ್ಕಾರದ ಜಿಎಸ್ ಟಿ ಪರಿಷ್ಕರಣೆ ಹಿನ್ನೆಲೆ ನಂದಿನಿ ಮೊಸರು, ತುಪ್ಪ, ಬೆಣ್ಣೆ ಮತ್ತು ಲಸ್ಸಿ ಸೇರಿದಂತೆ ಹಲವು ಉತ್ಪನ್ನಗಳ ದರ ಇಳಿಕೆಯಾಗಿದ್ದು, ಸೋಮವಾರದಿಂದ ಹೊಸ ದರ ಜಾರಿಗೆ ಬರಲಿದೆ ಅಂತ ಹೇಳಲಾಗಿದೆ.

ಬಿಎಸ್ ಟಿ ದರ ಇಳಿಕೆ ಬೆನ್ನಲ್ಲೇ ಶುಕ್ರವಾರ ಕೆಎಂಎಫ್ ಅಧಿಕಾರಿಗಳು ಸಭೆ ನಡೆಸಿದ್ದು, ಯಾವುದರ ಬೆಲೆ ಇಳಿಕೆಯಾಗಲಿದೆ ಎನ್ನುವ  ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ.

ಮೊಸರಿನ ದರ ಲೀಟರ್​ಗೆ 4 ರೂ. ಇಳಿಕೆ ನಿರೀಕ್ಷೆ ಇದೆ. ಜೊತೆಗೆ ತುಪ್ಪ, ಬೆಣ್ಣೆ, ಲಸ್ಸಿ ಸೇರಿ ಹಲವು ಉತ್ಪನ್ನಗಳ ದರ ಕೂಡ ಇಳಿಕೆ ಆಗಿದೆ.

2017ರಲ್ಲಿ ಹಾಲಿನ ಉತ್ಪನ್ನಗಳ ಮೇಲೆ ಜಿಎಸ್​​ಟಿ ವಿಧಿಸಲಾಗಿತ್ತು. 2022 ರಲ್ಲಿ ಜಿಎಸ್​ ಟಿಯನ್ನು ಶೇಕಡಾ 22ಕ್ಕೆ ಹೆಚ್ಚಿಸಲಾಗಿತ್ತು. ಆದರೆ ಇತ್ತೀಚೆಗೆ ಕೇಂದ್ರ ಸರ್ಕಾರ ಹಾಲಿನ ಉತ್ಪನ್ನಗಳ ಮೇಲಿನ ಸರಕು ಸೇವಾ ತೆರಿಗೆಯನ್ನು ಶೇ.12ರಿಂದ 5ಕ್ಕೆ ಇಳಿಕೆ ಮಾಡಿದ್ದು, ಇದು ಸೆ. 22ರಿಂದ ಜಾರಿಗೆ ಬರಲಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version