3:56 AM Thursday 11 - September 2025

ಕಾರ್ಯಕರ್ತರ ವಿರೋಧದಿಂದ ಮುಜುಗರಕ್ಕೀಡಾದ್ರಾ ಆರ್.ಅಶೋಕ್!?: ಮಂಡ್ಯ ಉಸ್ತುವಾರಿ ಬೇಡ ಎಂದ ಅಶೋಕ್!

r ashok
10/02/2023

ಬೆಂಗಳೂರು: ಮಂಡ್ಯ ಜಿಲ್ಲೆಯ ಉಸ್ತುವಾರಿ ಸಚಿವ ಸ್ಥಾನದಿಂದ ಕಂದಾಯ ಸಚಿವ ಆರ್.ಅಶೋಕ್‌ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿಡುಗಡೆಗೊಳಿಸಿದ್ದಾರೆ.

ತಮ್ಮನ್ನು ಮಂಡ್ಯ ಜಿಲ್ಲೆ ಉಸ್ತುವಾರಿ ಸಚಿವ ಸ್ಥಾನದ ಜವಾಬ್ದಾರಿಯಿಂದ ವಿಮುಕ್ತಿಗೊಳಿಸಬೇಕೆಂದು ಆರ್. ಅಶೋಕ್‌ ಸಿಎಂಗೆ ಪತ್ರ ಬರೆದಿದ್ದರು.  ಪತ್ರಕ್ಕೆ ಸ್ಪಂದಿಸಿ ಮಂಡ್ಯ ಉಸ್ತುವಾರಿ ಸಚಿವ ಸ್ಥಾನದಿಂದ ಬಿಡುಗಡೆ ಮಾಡಲಾಗಿದೆ.

ಈ ವಿಚಾರವಾಗಿ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಶುಕ್ರವಾರ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಮಂಡ್ಯ ಜಿಲ್ಲೆ ಉಸ್ತುವಾರಿಯಿಂದ ಮುಕ್ತ ಮಾಡಬೇಕೆಂದು ಆರ್‌ ಅಶೋಕ್ ಪತ್ರ ಬರೆದಿದ್ದಾರೆ. ಅದರಂತೆ ಮಂಡ್ಯ ಉಸ್ತುವಾರಿ ಬದಲಾವಣೆ ಮಾಡಲು ಆದೇಶ ಹೊರಡಿಸುತ್ತೇವೆ ಎಂದು ಹೇಳಿದ್ದಾರೆ.

ಮಂಡ್ಯ ಜಿಲ್ಲಾ ಉಸ್ತುವಾರಿಯನ್ನಾಗಿ ಕಂದಾಯ ಸಚಿವ ಆರ್ ಅಶೋಕ್ ಅವರನ್ನು ನೇಮಕ ಮಾಡಿದ್ದಕ್ಕೆ ಅಲ್ಲಿನ ಬಿಜೆಪಿ ಕಾರ್ಯಕರ್ತರೇ ಗೋ ಬ್ಯಾಕ್ ಅಶೋಕ್ ಎಂಬ ಅಭಿಯಾನ ಹಮ್ಮಿಕೊಂಡಿದ್ದರು. ಈ ಹಿನ್ನೆಲೆ ಮಂಡ್ಯದ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಬೇಡ ಎಂದು ಆರ್‌ ಅಶೋಕ್‌ ಹೇಳಿದ್ದಾರೆ ಎನ್ನಲಾಗಿದೆ.

ಆದರೆ, ಅಶೋಕ್‌ ಅವರು ಸಿಎಂಗೆ ಬರೆದ ಪತ್ರದಲ್ಲಿ ಜಿಲ್ಲೆಗೆ ಹೆಚ್ಚು ಸಮಯ ನೀಡಲು ಆಗುತ್ತಿಲ್ಲ ಎಂದು ಹೇಳಿದ್ದಾರೆ.

14ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿಯ ಅಧ್ಯಕ್ಷರೂ ಆಗಿರುವ ಅಶೋಕ, ವಿಧಾನಸೌಧದ ಆವರಣದಲ್ಲಿ ಬಸವೇಶ್ವರ ಹಾಗೂ ಕೆಂಪೇಗೌಡರ ಪುತ್ಥಳಿ ಸ್ಥಾಪಿಸುವ ಉದ್ದೇಶದಿಂದ ನೇಮಿಸಲಾಗಿರುವ ಸಮಿತಿಗೂ ಅಧ್ಯಕ್ಷರಾಗಿದ್ದಾರೆ. ಕಂದಾಯ ಇಲಾಖೆ ಪ್ರಾರಂಭಿಸಿರುವ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಕನಿಷ್ಠ ಎರಡು– ಮೂರು ಜಿಲ್ಲೆಗಳಲ್ಲಿ ತಾವು ವಾಸ್ತವ್ಯ ಹೂಡಬೇಕಾಗಿರುವುದರಿಂದ ಮಂಡ್ಯ ಉಸ್ತುವಾರಿ ಹೊಣೆ ನಿಭಾಯಿಸುವುದು ಹೊರೆಯಾಗುತ್ತದೆ ಎಂದು ಅಶೋಕ್ ಪತ್ರದಲ್ಲಿ ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version