ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ರೈತ ಸಾವು, ಟ್ರ್ಯಾಕ್ಟರ್ ನಜ್ಜುಗುಜ್ಜು - Mahanayaka

ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ರೈತ ಸಾವು, ಟ್ರ್ಯಾಕ್ಟರ್ ನಜ್ಜುಗುಜ್ಜು

belagavi
07/04/2024

ಬೆಳಗಾವಿ:  ಟ್ರ್ಯಾಕ್ಟರ್ ಗೆ ಗೂಡ್ಸ್ ವಾಹನವೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ರೈತರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ಸುವರ್ಣಸೌಧದ ಬಳಿ ಬಸ್ತವಾಡ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಬಸ್ತವಾಡ ಗ್ರಾಮದ ಮಲ್ಲಪ್ಪ ದೊಡ್ಡಕಲ್ಲನ್ನವರ(41) ಮೃತಪಟ್ಟ ರೈತನಾಗಿದ್ದು, ಟ್ರ್ಯಾಕ್ಟರ್ ನಲ್ಲಿ ಕೊತ್ತಂಬರಿ ಸೊಪ್ಪು ಸಾಗಿಸುತ್ತಿದ್ದ ವೇಳೆ ಹಿಂಬದಿಯಿಂದ ಬಂದು ಗೂಡ್ಸ್ ವಾಹನ ಡಿಕ್ಕಿ ಹೊಡೆದಿದೆ.

ಅಪಘಾತದ ತೀವ್ರತೆಗೆ ಟ್ರ್ಯಾಕ್ಟರ್ ನಜ್ಜುಗುಜ್ಜಾಗಿದೆ.  ಟ್ರ್ಯಾಕ್ಟರ್ ಪೀಸ್ ಪೀಸ್ ಆಗಿ ಚಕ್ರಗಳು ತುಂಡಾಗಿ ರಸ್ತೆಯಲ್ಲಿ ಬಿದ್ದಿರುವ ದೃಶ್ಯ ಬೆಚ್ಚಿಬೀಳಿಸುವಂತಿದೆ.


Provided by

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ