3:00 PM Wednesday 27 - August 2025

ರಾಣಿಝರಿ ಬಿರುಕು ಬಗ್ಗೆ ಗೂಗಲ್ ಮಿಸ್‌ ಗೈಡ್, ರಾಣಿಝರಿಗೆ ಅಧಿಕಾರಿಗಳ ದೌಡು!

kottigehara
22/08/2024

ಕೊಟ್ಟಿಗೆಹಾರ: ಚಿಕ್ಕಮಗಳೂರು  ಜಿಲ್ಲೆಯ ಮೂಡಿಗೆರೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ರಾಣಿಝರಿ ಎಡ್ಜ್ ಪಾಯಿಂಟ್ ಬಿರುಕು ಬಿಟ್ಟಿರುವ ರೀತಿ ಗೂಗಲ್ ಮ್ಯಾಪ್ ನಲ್ಲಿ ಗೋಚರಿಸಿದ್ದು, ಸ್ಥಳಕ್ಕೆ ಬುಧವಾರ ಅಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸಿದರು.

ಚಿಕ್ಕಮಗಳೂರು–ದಕ್ಷಿಣ ಕನ್ನಡ ಗಡಿಭಾಗದಲ್ಲಿರುವ ‘ರಾಣಿ ಝರಿ’ ಪ್ರವಾಸಿತಾಣದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಬಾರಿ ಮಳೆಯಾಗುತ್ತಿದೆ. ಗೂಗಲ್ ಮ್ಯಾಪ್‌ನಲ್ಲಿ `ಗೂಗಲ್ ಮಿಸ್‌ ಗೈಡ್ ಆಗಿರುವ ಹಿನ್ನೆಲೆ ರಾಣಿಝರಿಗೆ ಅಧಿಕಾರಿಗಳ ದೌಡಾಯಿಸಿದೆ.

ಜಿಲ್ಲೆಯ ಮೂಡಿಗೆರೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ರಾಣಿಝರಿ ಎಡ್ಜ್ ಪಾಯಿಂಟ್ ಬಿರುಕು ಬಿಟ್ಟಿರುವ ರೀತಿ ಗೂಗಲ್ ಮ್ಯಾಪ್ ನಲ್ಲಿ ಗೋಚರಿಸಿದ್ದು, ಸ್ಥಳಕ್ಕೆ ಬುಧವಾರ ಅಧಿಕಾರಿಗಳು  ದೌಡಾಯಿಸಿ ಪರಿಶೀಲನೆ ನಡೆಸಿದರು.

ಚಿಕ್ಕಮಗಳೂರು–ದಕ್ಷಿಣ ಕನ್ನಡ ಗಡಿಭಾಗದಲ್ಲಿರುವ ರಾಣಿ ಝರಿ ಪ್ರವಾಸಿತಾಣದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಬಾರಿ ಮಳೆಯಾಗುತ್ತಿದೆ. ಗೂಗಲ್ ಮ್ಯಾಪ್‌ನಲ್ಲಿ ಬಿರುಕು ಕಂಡು ಬರುತ್ತಿರುವ ಹಿನ್ನೆಲೆ ಪುತ್ತೂರು ಉಪವಿಭಾಗಾಧಿಕಾರಿಗಳು ರಾಣಿಝರಿ ಸಮೀಪ ಬಾರಿ ಮಳೆಯಾಗುತ್ತಿರುವುದರಿಂದ ಭೂಮಿಕುಸಿತವಾಗುವ ಸಂಭವವಿದೆ ಎಂದು ಚಿಕ್ಕಮಗಳೂರು ಉಪವಿಭಾಗಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಕೂಡಲೇ ಎಚ್ಚೆತ್ತ ಉಪವಿಭಾಗಾಧಿಕಾರಿಗಳ ಸೂಚನೆಯ ಮೇರೆಗೆ ನಿಡುವಾಳೆ ಮತ್ತು ಸುಂಕಸಾಲೆ ಗ್ರಾಮ ಲೆಕ್ಕಾಧಿಕಾರಿಗಳಾದ ಜಯಪ್ರಕಾಶ್ ಮತ್ತು ಮಹೇಶ್ ಸ್ಥಳ್ಕಕೆ ತೆರಳಿ ಪರಿಶೀಲನೆ ನಡೆಸಿದ್ದು, ಯಾವುದೇ ಭೂಕುಸಿತ ಹಾಗೂ ಬಿರುಕು ಕಂಡು ಬಂದಿಲ್ಲ ಎಂದು ತಿಳಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ

Exit mobile version