ಪೊಲೀಸರ ವಿರುದ್ಧ ವಿವಾದಾತ್ಮಕ ಹೇಳಿಕೆ: ತಮಿಳುನಾಡು ಯೂಟ್ಯೂಬರ್ ಮೇಲೆ ಗೂಂಡಾ ಕಾಯ್ದೆ ಜಾರಿ

ದಕ್ಷಿಣ ರಾಜ್ಯದ ಹಿರಿಯ ಪೊಲೀಸರು ಮತ್ತು ಮಹಿಳಾ ಪೊಲೀಸ್ ಸಿಬ್ಬಂದಿಯ ಬಗ್ಗೆ ಅವಹೇಳನಕಾರಿ ಮತ್ತು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಪ್ರಸಿದ್ಧ ಯೂಟ್ಯೂಬರ್ ಸವುಕ್ಕು ಶಂಕರ್ ಅವರನ್ನು ಬಂಧಿಸಿದ ನಂತರ ತಮಿಳುನಾಡು ಪೊಲೀಸರು ಭಾನುವಾರ ಕಠಿಣ ಗೂಂಡಾ ಕಾಯ್ದೆಯನ್ನು ವಿಧಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಯಮತ್ತೂರು ಸೈಬರ್ ಕ್ರೈಂ ಪೊಲೀಸರು ಶಂಕರ್ ಅವರನ್ನು ಬಂಧಿಸಿದ್ದಾರೆ.
‘ರೆಡ್ ಪಿಕ್ಸ್ 24×7’ ಯೂಟ್ಯೂಬ್ ಚಾನೆಲ್‌ನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಮಹಿಳಾ ಪೊಲೀಸ್ ಸಿಬ್ಬಂದಿ ವಿರುದ್ಧ ಆಕ್ಷೇಪಾರ್ಹ ರೀತಿಯಲ್ಲಿ ಮಾತನಾಡಿದ ಚಾನೆಲ್ ನ ಮಾಲೀಕ ಫೆಲಿಕ್ಸ್ ಜೆರಾಲ್ಡ್ ಅವರೊಂದಿಗಿನ ಸಂದರ್ಶನವನ್ನು ಪ್ರಕಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕರ್ ಅವರನ್ನು ಬಂಧಿಸಲಾಗಿದೆ.
ಕೊಯಮತ್ತೂರು ಪೊಲೀಸರು ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ಶಂಕರ್ ವಿರುದ್ಧ ಈಗಾಗಲೇ ಡ್ರಗ್ಸ್ ಪ್ರಕರಣ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಏಳು ಪ್ರಕರಣಗಳು ಬಾಕಿ ಇವೆ ಎಂದಿದ್ದಾರೆ.
ಭಾನುವಾರ ಆತನ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಈ ಕಾಯ್ದೆಯಡಿ ಬಂಧನ ಆದೇಶವನ್ನು ಸೈಬರ್ ಕ್ರೈಂ ಪೊಲೀಸ್ ಅಧಿಕಾರಿಯೊಬ್ಬರು ಮೇ 12 ರಂದು ಶಂಕರ್ ಅವರಿಗೆ ನೀಡಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth