ಗೋಶಾಲೆಗಳಿಗೆ ಪ್ರೋತ್ಸಾಹ ನೀಡಲಾಗಿದೆ: ಸಿಎಂ ಬಸವರಾಜ ಬೊಮ್ಮಾಯಿ - Mahanayaka

ಗೋಶಾಲೆಗಳಿಗೆ ಪ್ರೋತ್ಸಾಹ ನೀಡಲಾಗಿದೆ: ಸಿಎಂ ಬಸವರಾಜ ಬೊಮ್ಮಾಯಿ

basavaraj bomyi
09/03/2023


Provided by

ವಿಜಯಪುರ, (ಬಬಲೇಶ್ವರ): ಕಂದಾಯ ನಿವೇಶನಗಳಲ್ಲಿ ಶಿಕ್ಷಣ, ಗೋಶಾಲೆಗಳಿಗೆ ಪ್ರೋತ್ಸಾಹ ನೀಡಲು ಕೊಡಲಾಗಿದೆ. ಅದರರ್ಥ ನಾವು ಎಲ್ಲಾ ಗೋಮಾಳ ಜಮೀನು ನೀಡಿದ್ದೇವೆ ಎಂದಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಬಬಲೇಶ್ವರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆರ್.ಎಸ್.ಎಸ್ ನವರಿಗೆ ಗೋಮಾಳ ಜಾಗ ನೀಡಲಾಗುತ್ತಿದೆ ಎಂದು ಮಾಡಿರುವ ಆರೋಪಕ್ಕೆ ಉತ್ತರಿಸಿ ಹಿಂದೆ ಅವರು ಅವರಿಗೆ ಬೇಕಾಗಿದ್ದ ಸಂಸ್ಥೆಗಳಿಗೆ ಜಮೀನು ನೀಡಿದ್ದಾರೆ. ಗೋಮಾಳ ಜಾಗವನ್ನು ನಾವೇನು ಕೊಟ್ಟಿಲ್ಲ ಎಂದರು.

ಸಂಸದೆ ಸಮಲತಾ ಅವರು ಬಿಜೆಪ ಸೇರುವ ಕುರಿತು ಪ್ರತಿಕ್ರಿಯೆ ನೀಡಿ ಪ್ರಕ್ರಿಯೆ ನಡೆದಿದೆ. ಮಾತುಕತೆ ನಡೆದ ನಂತರ ಸೇರಲಿದ್ದಾರೆ ಎಂದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ