ದಕ್ಷಿಣ ಕನ್ನಡ: ಕರ್ತವ್ಯಕ್ಕೆ ಹಾಜರಾಗದೇ ಮುಷ್ಕರದಲ್ಲಿ ಭಾಗಿಯಾದ ಸರ್ಕಾರಿ ನೌಕರರು

]7ನೇ ವೇತನ ಆಯೋಗದಿಂದ ಮಧ್ಯಂತರ ವರದಿ ಪಡೆದು ವೇತನ ಹೆಚ್ಚಳ ಹಾಗೂ ಹಳೆ ಪಿಂಚಣಿ ಯೋಜನೆ(ಒಪಿಎಸ್) ಜಾರಿಗೊಳಿಸಬೇಕೆಂದು ಆಗ್ರಹಿಸಿ ಸರಕಾರಿ ನೌಕರರ ಸಂಘದ ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಬೆಳಗ್ಗಿನಿಂದ ಸರಕಾರಿ ನೌಕರರು ಕರ್ತವ್ಯಕ್ಕೆ ಹಾಜರಾಗದೇ ಮುಷ್ಕರದಲ್ಲಿ ಭಾಗಿಯಾಗಿದ್ದಾರೆ.
ಜಿಲ್ಲೆಯಲ್ಲಿ ಬಹುತೇಕ ಕಚೇರಿಗಳು ಎಂದಿನಂತೆ ತೆರೆದಿವೆ. ಆದರೆ ಸಾರ್ವಜನಿಕರಿಗೆ ನೀಡುವ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಆರೋಗ್ಯ ಇಲಾಖೆಯಲ್ಲಿ ತುರ್ತು ಸೇವೆ ಹೊರತುಪಡಿಸಿ ಸಿಬ್ಬಂದಿ ವರ್ಗವು ಕಪ್ಪುಪಟ್ಟಿ ಧರಿಸಿ ಕರ್ತವ್ಯಕ್ಕೆ ಹಾಜರಾಗಿರುವುದು ಕಂಡುಬಂದಿದೆ.
ನಗರದ ಲೋಕೋಪಯೋಗಿ ಇಲಾಖೆಯ ಕಚೇರಿಯ ಮುಂದೆ ನೌಕರರು ಜಮಾಯಿಸಿರುವುದು ಕಂಡುಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw