ಪಂಚಮಸಾಲಿ ಹೋರಾಟದಲ್ಲಿ ಸರ್ಕಾರ ಜವಾಬ್ದಾರಿಯುತವಾಗಿ ನಡೆದುಕೊಂಡಿದೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ - Mahanayaka

ಪಂಚಮಸಾಲಿ ಹೋರಾಟದಲ್ಲಿ ಸರ್ಕಾರ ಜವಾಬ್ದಾರಿಯುತವಾಗಿ ನಡೆದುಕೊಂಡಿದೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್

g parameshwar
12/12/2024


Provided by

ಬೆಳಗಾವಿ ಸುವರ್ಣಸೌಧ: ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ಹಿಂದುಳಿದ ವರ್ಗಗಳ ಪ್ರವರ್ಗ 2ಎ ಅಡಿಯಲ್ಲಿ ಮೀಸಲಾತಿಗೆ ಆಗ್ರಹಿಸಿ ಬೆಳಗಾವಿಯ ಸುವರ್ಣ ವಿಧಾನಸೌಧದ ಬಳಿ ಪಂಚಮಸಾಲಿ ಪೀಠಾಧಿಪತಿ ಜಯಮೃತ್ಯಂಜಯಸ್ವಾಮಿ ಮತ್ತಿತರರ ನೇತೃತ್ವದಲ್ಲಿ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಸರ್ಕಾರ ಮತ್ತು ಪೊಲೀಸ್ ಇಲಾಖೆ ಜವಾಬ್ದಾರಿಯುತವಾಗಿ ನಡೆದುಕೊಂಡಿದೆ ಎಂದು ರಾಜ್ಯದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

ವಿಧಾನಪರಿಷತ್ ನಲ್ಲಿ ಶೂನ್ಯ ಅವಧಿಯಲ್ಲಿ ಅವರು ಮಾತನಾಡಿ, ಪ್ರತಿಭಟನಾಕಾರರಿಗೆ ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಎಲ್ಲಾ ರೀತಿಯ ಅವಕಾಶಗಳನ್ನು ನೀಡಲಾಗಿತ್ತು. ಆದರೆ ಪ್ರತಿಭಟನಾಕಾರರು ಕಾನೂನು ಮತ್ತು ಸುವ್ಯವಸ್ಥಗೆ ಭಂಗ ತರುವ ರೀತಿಯಲ್ಲಿ ಆದೇಶಗಳನ್ನು ಉಲ್ಲಂಘಿಸಿ ಸುವರ್ಣ ವಿಧನಸೌಧಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದ ಕಾರಣ ಲಘು ಲಾಠಿ ಪ್ರಹಾರ ನಡೆಸಲಾಗಿದ್ದು, ಪ್ರತಿಭಟನಾಕಾರರನ್ನು ಮುಂಜಾಗ್ರತಾ ಬಂಧನ ಮಾತ್ರ ನಡೆಸಲಾಗಿತ್ತು ಎಂದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

 

ಇತ್ತೀಚಿನ ಸುದ್ದಿ