2:56 AM Thursday 11 - December 2025

ಶಿಕ್ಷೆ ಪ್ರಮಾಣ 10 ವರ್ಷ: ಮೈಕ್ರೋ ಫೈನಾನ್ಸ್ ಕಂಪೆನಿಗಳಿಗೆ ಬಿಸಿಮುಟ್ಟಿಸಲು ಮುಂದಾದ ಸರ್ಕಾರ

g parameshwar
05/02/2025

ಬೆಂಗಳೂರು: ಮೈಕ್ರೋ ಫೈನಾನ್ಸ್ ಕಂಪೆನಿಗಳಿಗೆ ಕಾನೂನಿನ ಮೂಲಕ ಬಿಸಿ ಮುಟ್ಟಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಶಿಕ್ಷೆಯ ಪ್ರಮಾಣ 10 ವರ್ಷಕ್ಕೆ ಹೆಚ್ಚಳ ಮಾಡಿದೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಮೊದಲು ಈ ಬಿಲ್ ನಲ್ಲಿ 3 ವರ್ಷ ಶಿಕ್ಷೆ ಇತ್ತು, ಈಗ ಅದನ್ನ 10 ವರ್ಷಕ್ಕೆ ಹೆಚ್ಚಳ ಮಾಡಿದ್ದೇವೆ, ದಂಡ ಕೂಡ 5 ಲಕ್ಷ ರೂ. ಮಾಡಿದ್ದೇವೆ ಎಂದರು.

ರಾಜ್ಯಪಾಲರಿಗೆ ಬಿಲ್ ಕಳಿಸಿದ್ದೇವೆ. ಇವತ್ತು ಆಗುತ್ತಾ ಗೊತ್ತಿಲ್ಲ, ಅವರು ಊರಿಗೆ ಹೋಗಿದ್ದಾರೆ ಎನ್ನುತ್ತಿದ್ದಾರೆ. ಬಂದು ನೀಡಿ ಸಹಿ ಮಾಡಿದ ಕೂಡಲೇ ಸುಗ್ರಿವಾಜ್ಞೆ ಜಾರಿಯಾಗಲಿದೆ ಎಂದು ಪರಮೇಶ್ವರ್ ತಿಳಿಸಿದರು.

ಬಿಲ್ ವಿರುದ್ಧ ಮೈಕ್ರೋ ಫೈನಾನ್ಸ್ ಕಂಪೆನಿಗಳು ಕೋರ್ಟ್ ಗೆ ಹೋಗಬಹುದು ಎಂದು ಬಿಲ್ ಸಿದ್ಧ ಮಾಡುವುದು ತಡವಾಗಿದೆ. ಮೊದಲ ಕರಡು ಸಿದ್ಧ ಮಾಡಿದಾಗ ಫೈನಾನ್ಸ್ ಕಂಪೆನಿಗಳು ಕೋರ್ಟ್ ಗೆ ಹೋಗಬಹುದು ಎಂದು ಚರ್ಚಿಸಿದ್ದೆವು ,ಎಲ್ಲ ಮುಂಜಾಗೃತಾ ಕ್ರಮ ತೆಗೆದುಕೊಳ್ಳಬೇಕು ಎಂದು ಸಿಎಂ ಕಾನೂನು ಇಲಾಖೆಗೆ ಸೂಚನೆ ಕೊಟ್ಟಿದ್ದರು. ಹೀಗಾಗಿ 2 ದಿನ ತಡವಾಗಿದೆ ಎಂದರು.

ಕಿರುಕುಳ ನೀಡುವವರಿಗೆ ಕಾನೂನಿನ ಬಿಸಿ ತಟ್ಟಬೇಕು. ಕಾಟಾಚಾರಕ್ಕೆ ಕಾನೂನು ಮಾಡಿದರೆ, ಅಂತಹ ಕಿರುಕುಳ ಪ್ರಕರಣಗಳು ನಿಲ್ಲುವುದಿಲ್ಲ, ಹಾಗಾಗಿ ದಂಡ ಮತ್ತು ಶಿಕ್ಷೆ ಜಾಸ್ತಿ ಮಾಡಿದ್ದೇವೆ. ಕಠಿಣ ಕಾನೂನಿನಿಂದ ಮಾತ್ರ ಕಿರುಕುಳ ನಿಲ್ಲುತ್ತದೆ ಎಂದು ಅವರು ಹೇಳಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/HEkqDgrW2BlJLad5kZ1DX7

ಇತ್ತೀಚಿನ ಸುದ್ದಿ

Exit mobile version