ಸಿದ್ದರಾಮಯ್ಯಗೆ ಸಂಕಷ್ಟ: ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ರಾಜ್ಯಪಾಲರು - Mahanayaka
12:49 PM Saturday 18 - October 2025

ಸಿದ್ದರಾಮಯ್ಯಗೆ ಸಂಕಷ್ಟ: ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ರಾಜ್ಯಪಾಲರು

c.m siddaramaya
17/08/2024

ಬೆಂಗಳೂರು: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ.


Provided by

ಟಿ.ಜೆ.ಅಬ್ರಾಹಂ, ಸ್ನೇಹಜೀವಿ ಕೃಷ್ಣಾ ಹಾಗೂ ಪ್ರದೀಪ್ ಕುಮಾರ್ ಎಸ್ ​ಪಿ ಎಂಬವರು ನೀಡಿರುವ ದೂರಿನ ಮೇರೆಗೆ ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ​​ಗೆ ಅನುಮತಿ ನೀಡಿದ್ದಾರೆ.

ಪ್ರಾಸಿಕ್ಯೂಷನ್ ಗೆ ಅನುಮತಿ ಸಿಕ್ಕ ಹಿನ್ನೆಲೆ ಸಿದ್ದರಾಮಯ್ಯನವರ ವಿರುದ್ಧ ದೂರು ದಾಖಲಿಸಲು ಸಿದ್ಧತೆ ನಡೆದಿದೆ. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಲೋಕಾಯುಕ್ತ/ಇತರೆ ತನಿಖಾ ಸಂಸ್ಥೆಗಳಲ್ಲಿ ಎಫ್ ಐಆರ್ ದಾಖಲಿಸುವ ಸಾಧ್ಯತೆ ಇದೆ.

ಪ್ರಾಸಿಕ್ಯೂಷನ್ ಅಂದ್ರೆ ಏನು?

ಪ್ರಾಸಿಕ್ಯೂಷನ್  ಎಂದರೆ ಕಾನೂನು ಕ್ರಮ ಎಂದರ್ಥ, ಮುಖ್ಯಮಂತ್ರಿಯ ವಿರುದ್ಧ ಕಾನೂನು ಕ್ರಮ ಎನ್ನುವುದು ಭಾರತೀಯ ರಾಜ್ಯದಲ್ಲಿ ಸರ್ಕಾರದ ಮುಖ್ಯಸ್ಥರಾಗಿರುವ ಹಾಲಿ ಮುಖ್ಯಮಂತ್ರಿಯ ವಿರುದ್ಧ ಅಪರಾಧ ಚಟುವಟಿಕೆಗಳು ಅಥವಾ ಕಾನೂನಿನ ಉಲ್ಲಂಘನೆಗಾಗಿ ಕಾನೂನು ಪ್ರಕ್ರಿಯೆಗಳನ್ನು ಒಳಗೊಂಡಿರುತ್ತದೆ. ಸಿಎಂ ಸರ್ಕಾರದ ಮುಖ್ಯಸ್ಥನಾಗಿದ್ದು, ಸಂವಿಧಾನಾತ್ಮಕವಾಗಿ, ಆಡಳಿತಾತ್ಮಕವಾಗಿ ಉನ್ನತ ಶ್ರೇಣಿಯ ಸ್ಥಾನ ಮತ್ತು ಅವರಿಗೆ ನೀಡಲಾದ ಕಾನೂನು ರಕ್ಷಣೆಗಳಿಂದಾಗಿ ಈ ಪ್ರಕ್ರಿಯೆಯು ಸಾಮಾನ್ಯವಾಗಿ ಸಂಕೀರ್ಣವಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ