ಸರ್ಕಾರ ಭರವಸೆಗಳನ್ನು ಈಡೇರಿಸಿದೆ, ಎದೆ ತಟ್ಟಿ ಉತ್ತರಿಸಿ: ಶಾಸಕರಿಗೆ ಸಿಎಂ ಸೂಚನೆ
ಪಕ್ಷ ಕೊಟ್ಟ ಭರವಸೆಗಳನ್ನು ಸರ್ಕಾರ ಈಡೇರಿಸಿದೆ, ಎದೆ ತಟ್ಟಿ ಉತ್ತರಿಸಿ ಎಂದು ಸಿಎಂ ಸಿದ್ದರಾಮಯ್ಯ ವಿಧಾನಸೌಧದಲ್ಲಿ ಹೇಳಿದರು. ‘ಯಾವ ಭರವಸೆಗಳನ್ನೂ ಈಡೇರಿಸದ ಬಿಜೆಪಿ ಸುಳ್ಳುಗಳ ಮೊರೆ ಹೋಗಿದೆ. ವಿಪಕ್ಷಗಳಿಗೆ ತಕ್ಕ ಉತ್ತರ ಕೊಡಿ ಎಂದು ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರಿಗೆ ಸಿಎಂ ಸೂಚನೆ ನೀಡಿದ್ದಾರೆ.
2023-24ನೇ ಸಾಲಿನ ರಾಜ್ಯ ಬಜೆಟ್ ಮಂಡನೆಯನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಆರಂಭಿಸಿದ್ದಾರೆ.14ನೇ ಬಾರಿ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ, ಈ ಮೂಲಕ ದಾಖಲೆ ಬರೆಯಲಿದ್ದಾರೆ.
ರಾಜ್ಯ ಬಜೆಟ್ ಮಂಡನೆಗೆ ವಿರೋಧ ವ್ಯಕ್ತಪಡಿಸಲು ವಿಪಕ್ಷಗಳು ತುದಿಗಾಲಲ್ಲಿ ನಿಂತ ಹಿನ್ನೆಲೆಯಲ್ಲಿ ವಿಪಕ್ಷಗಳಿಗೆ ತಕ್ಕ ಉತ್ತರ ಕೊಡಿ ಎಂದು ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw




























