ಸರ್ಕಾರದ ಹಣ ಫೋನ್ ಪೇ ಮೂಲಕ ಪ್ರಿಯತಮೆ ಖಾತೆಗೆ | ಕಳಸ ಅರಣ್ಯ ಇಲಾಖೆಯ ಡಿ.ಆರ್.ಎಫ್.ಓ. ಚಂದನ್ ಗೌಡ ಅಮಾನತು
ಚಿಕ್ಕಮಗಳೂರು: ಸರ್ಕಾರದ ಹಣ ಫೋನ್ ಪೇ ಮೂಲಕ ಪ್ರಿಯತಮೆ ಖಾತೆಗೆ ಕಳುಹಿಸಿದ ಆರೋಪದ ಹಿನ್ನೆಲೆ ಕಳಸ ಅರಣ್ಯ ಇಲಾಖೆಯ ಡಿ.ಆರ್.ಎಫ್.ಓ. ಚಂದನ್ ಗೌಡ ಅವರನ್ನು ಅಮಾನತು ಮಾಡಲಾಗಿದೆ.
ಸರ್ಕಾರದ 9 ಸಾವಿರ ಹಣ ತನ್ನ ಲವರ್ ಮೋನಿಕಾ ಎಂಬ ಯುವತಿಯ ಖಾತೆಗೆ ಜಮಾವಾಗಿರುವ ಅನುಮಾನ ಸೃಷ್ಟಿಯಾಗಿದ್ದು, ರಾಣಿಝರಿ ಜಲಪಾತ, ಬಂಡಾಜೆ ಫಾಲ್ಸ್ ಬಳಿ ಟಿಕೆಟ್ ನಲ್ಲಿ ಭಾರೀ ಗೋಲ್ ಮಾಲ್ ಶಂಕೆ ವ್ಯಕ್ತವಾಗಿದೆ.
ಆನ್ ಲೈನ್ ಟಿಕೆಟ್ ಫೋರ್ಜರಿ ಮಾಡಿ ಸರ್ಕಾರಕ್ಕೆ ಮೋಸ ಮಾಡಲಾಗಿದ್ದು, ಸದ್ಯಕ್ಕೆ 9000 ಹಣವನ್ನ ಸರ್ಕಾರಕ್ಕೆ ಮೋಸ ಮಾಡಿರುವುದು ಸಾಬೀತಾಗಿದೆ. ಇದೇ ರೀತಿ ಇಲಾಖೆಗೆ ಸೇರಬೇಕಾಗಿದ್ದ ಲಕ್ಷಗಟ್ಟಲೇ ಹಣ ಮೋನಿಕಾ ಎಂಬ ಯುವತಿ ಖಾತೆಗೆ ಜಮಾವಾಗಿರೋ ಅನುಮಾನ ಸೃಷ್ಟಿಯಾಗಿದೆ.
ಬಂಡಾಜೆ ಫಾಲ್ಸ್ ಬಳಿ 200ಕ್ಕೂ ಅಧಿಕ ಜನರಿಗೆ ಟಿಕೆಟ್ ಇಲ್ಲದೆ ಪಾಲ್ಸ್ ಗೆ ಅವಕಾಶ ನೀಡಲಾಗಿತ್ತು. ಮದ್ಯ ಚೆಕ್ ಮಾಡಲು ಹೋಗಿದ್ದ ಪೊಲೀಸರಿಗೆ ಪ್ರವಾಸಿಗರು ಸಿಕ್ಕಿಬಿದ್ದಿದ್ದರು. ಹೀಗಾಗಿ ಪರಿಶೀಲನೆ ನಡೆಸಿದ ವೇಳೆ ಜೂನ್ ತಿಂಗಳ ಆನ್ ಲೈನ್ ಟಿಕೆಟ್ ಬುಕ್ಕಿಂಗ್, ಪ್ರವಾಸಿಗರ ನೋಂದಣಿ ಪುಸ್ತಕಕ್ಕೂ ಸಂಬಂಧವೇ ಇಲ್ಲ ಇಲ್ಲದಂತಿತ್ತು.
ಇದೀಗ ನಕಲಿ ಆನ್ ಲೈನ್ ಟಿಕೆಟ್ ಮುದ್ರಿಸಿ ಸರ್ಕಾರಕ್ಕೆ ಮೋಸ ಮಾಡಿರೋ ಬಗ್ಗೆ ಇಲಾಖೆಗೆ ಅನುಮಾನ ವ್ಯಕ್ತವಾಗಿದೆ. ಸದ್ಯ ಕಳಸ ಡಿ.ಆರ್.ಎಫ್.ಓ. ಚಂದನ್ ಗೌಡ ಅಮಾನತು ಮಾಡಿ, ಕೊಪ್ಪ ಡಿ.ಎಫ್.ಓ. ಉಪೇಂದ್ರ ಪ್ರತಾಪ್ ಸಿಂಗ್ ಆದೇಶ ನೀಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth