ಗೋಹತ್ಯೆ ನಿಷೇಧ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ - Mahanayaka
3:23 PM Thursday 12 - September 2024

ಗೋಹತ್ಯೆ ನಿಷೇಧ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ

12/01/2021

ಬೆಂಗಳೂರು:  ಗೋಹತ್ಯೆ ನಿಷೇಧ ಕಾಯ್ದೆ ಕುರಿತಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ನೀಡಿದ್ದು, ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ ಓಕಾ ಹಾಗೂ ಸಚಿನ್ ಶಂಕರ್ ಮಗುದಂ ಅವರನ್ನೊಳಗೊಂಡ ಪೀಠ ಸರ್ಕಾರಕ್ಕೆ ನೊಟೀಸ್ ಜಾರಿ ಮಾಡಿದೆ.

ಗೋಹತ್ಯೆ ನಿಷೇಧ ಸುಗ್ರೀವಾಜ್ಞೆಯನ್ನು ಪ್ರಶ್ನಿಸಿ ಪಿಳ್ಳಣ್ಣ ಗಾರ್ಡನ್ ನಿವಾಸಿ ಮೊಹಮ್ಮದ್ ಆರಿಫ್ ಜಮೀಲ್ ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.  ಗೋಹತ್ಯೆ ನಿಷೇಧದಿಂದ ಭಾರತದ ಸಂವಿಧಾನದ 19 (ಜಿ) ವಿಧಿ ಖಾತರಿಪಡಿಸಿದ ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿದೆ.  ಸಂವಿಧಾನದ 21ನೇ ಪರಿಚ್ಛೇದದ ಅಡಿಯಲ್ಲಿ ಜೀವನೋಪಾಯದ ಹಕ್ಕನ್ನು ಉಲ್ಲಂಘಿಸಿವೆ, ವ್ಯಾಪಾರ ಮತ್ತು ವ್ಯವಹಾರದ ಹಕ್ಕನ್ನು ಉಲ್ಲಂಘಿಸಿವೆ ಎಂದು ಅರ್ಜಿಯಲ್ಲಿ ಅವರು ತಿಳಿಸಿದ್ದರು.

ಪ್ರಾಣಿ ಹತ್ಯೆ ನಿಷೇಧಿಸುವುದರಿಂದ ಮಾಂಸ ಮಾರಾಟಗಾರರು ಸಂಕಷ್ಟಕ್ಕೀಡಾಗುತ್ತಾರೆ.  ಈ ಕಾನೂನು ವ್ಯಾಪಾರದ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ನಾಗರಿಕರು ತಮ್ಮ ಆಹಾರದ ಆಯ್ಕೆಯಿಂದ ವಂಚಿತರಾಗುತ್ತಾರೆ ಎಂದು ಅರ್ಜಿಯಲ್ಲಿ  ತಿಳಿಸಲಾಗಿದೆ. ಈ ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿರುವ  ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ್ದು, ಫೆಬ್ರವರಿ 17ರಂದು ವಿಚಾರಣೆ ನ ನಡೆಸುವುದಾಗಿ ತಿಳಿಸಿದೆ.


Provided by

ಇತ್ತೀಚಿನ ಸುದ್ದಿ