ಗ್ರಾಮ ಪಂಚಾಯತ್ ಸದಸ್ಯನ ಮೇಲೆ ಕಬ್ಬಿಣದ ರಾಡ್ ನಿಂದ ಹಲ್ಲೆ! - Mahanayaka
10:53 PM Wednesday 15 - October 2025

ಗ್ರಾಮ ಪಂಚಾಯತ್ ಸದಸ್ಯನ ಮೇಲೆ ಕಬ್ಬಿಣದ ರಾಡ್ ನಿಂದ ಹಲ್ಲೆ!

noor ahmed
03/06/2023

ಗ್ರಾಮ ಪಂಚಾಯತ್ ಸದಸ್ಯರೊಬ್ಬರ ಮೇಲೆ ಕಬ್ಬಿಣದ ರಾಡ್ ನಿಂದ ಗಂಭೀರ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಹೊರವಲಯದ ಪಡುಪೆರಾರ ಗ್ರಾಮ ಪಂಚಾಯತ್ ವ್ಯಾಪ್ತಿಯ ನೂರ್ ಬಾಗ್ ಎಂಬಲ್ಲಿ ನಡೆದಿದೆ.


Provided by

ಹಲ್ಲೆಗೊಳಗಾದವರನ್ನು ಪಡುಪೆರಾರ ಗ್ರಾಮ ಪಂಚಾಯತ್ ನ ಕೊರಕಂಬ್ಳ ವಾರ್ಡ್ ಸದಸ್ಯ ನೂರ್ ಅಹ್ಮದ್ ಎಂದು ಗುರುತಿಸಲಾಗಿದೆ. ಅದೇ ಪರಿಸರದ ರಾಜೇಶ್ ಮತ್ತು ಕಾಂಟ್ರಾಕ್ಟರ್ ರಾಘವೇಂದ್ರ ಆಚಾರ್ ಎಂಬುವವರು ಹಲ್ಲೆ ನಡೆಸಿದ ಆರೋಪಿಗಳು.

ಪಡುಪೆರಾರ ಗ್ರಾಮ ಪಂಚಾಯತ್ ನ ಕೊರಕಂಬ್ಳ ವಾರ್ಡ್ ನಲ್ಲಿ ಪರವಾನಿಗೆ ಇಲ್ಲದೆ ಮನೆ ನಿರ್ಮಿಸಿರುವ ಕುರಿತು ಇಂದು ಗ್ರಾಮ ಪಂಚಾಯತ್ ನಲ್ಲಿ ನಡೆದ ಸಭೆಯಲ್ಲಿ ಚರ್ಚೆಗಳು ನಡೆದಿದ್ದವು. ಈ ಹಿನ್ನೆಲೆಯಲ್ಲಿ ಪಡುಪೆರಾರ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜೊತೆಗೆ ಹಲ್ಲೆಗೊಳಗಾದ ಗ್ರಾಮ ಪಂಚಾಯತ್ ಸದಸ್ಯ ನೂರ್ ಅಹ್ಮದ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪರವಾನಿಗೆ ಪಡೆದುಕೊಳ್ಳುವಂತೆ ಮನೆಯವರಿಗೆ ಸೂಚನೆ ನೀಡಿದ್ದರು ಎನ್ನಲಾಗಿದೆ.

ಈ ವೇಳೆ ಏಕಾಏಕಿ ದಾಳಿ ಮಾಡಿದ ಮನೆಯ ಗುತ್ತಿಗೆ ವಹಿಸಿರುವ ರಾಘವೇಂದ್ರ ಆಚಾರ್ ಮತ್ತು ಸ್ಥಳೀಯ ನಿವಾಸಿ ಹಾಗೂ ಬಿಜೆಪಿ ಕಾರ್ಯಕರ್ತನೆನ್ನಲಾದ ರಾಜೇಶ್ ಸಾಲಿಯಾನ್ ಕಬ್ಬಿಣದ ರಾಡಿನಿಂದ ನೂರ್ ಅಹ್ಮದ್ ಅವರಿಗೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಹಲ್ಲೆಯಿಂದ ನೂರು ಅಹ್ಮದ್ ತಲೆಗೆ ಗಂಭೀರ ಗಾಯವಾಗಿದ್ದು, ಕೈ, ಕಾಲು ಮತ್ತು  ಕಣ್ಣಿಗೂ ಗಾಯಗಳಾಗಿವೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ