7:09 PM Thursday 16 - October 2025

ಗ್ರಾಮ ಪಂಚಾಯತ್ ಅಧ್ಯಕ್ಷನ ವಿರುದ್ಧ ಮಾನಭಂಗಕ್ಕೆ ಯತ್ನ ದೂರು ನೀಡಿದ ಯುವತಿ!

vittal police
18/06/2021

ಕನ್ಯಾನ:  ಗ್ರಾಮ ಪಂಚಾಯತ್ ಅಧ್ಯಕ್ಷರೊಬ್ಬರ ಮೇಲೆ ಯುವತಿಯೋರ್ವಳು ಮಾನಭಂಗಕ್ಕೆ ಯತ್ನ ಪ್ರಕರಣ ದಾಖಲಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ  ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕನ್ಯಾನ  ಗ್ರಾಮ ಪಂಚಾಯತ್ ಅಧ್ಯಕ್ಷ ಅಬ್ದುಲ್ ರಹಿಮಾನ್ ಎಂಬವರ ಮೇಲೆ 23 ವರ್ಷ ವಯಸ್ಸಿನ ಯುವತಿ ದೂರು ನೀಡಿದ್ದು,  ಕನ್ಯಾನ ಗ್ರಾಮದ ಪಿಲಿಚಂಡಿ ಗುಡ್ಡದಲ್ಲಿ ನೀರಿನ ಸಂಪರ್ಕ ವಿಚಾರಕ್ಕೆ ಸಂಬಂಧಿಸಿದಂತೆ ಯುವತಿಯ ಮನೆಗೆ ಬೆಳಗ್ಗೆ ಪಿಡಿಒ ಮತ್ತು ಗ್ರಾ.ಪಂ. ಸಿಬ್ಬಂದಿ ನೀರಿನ ಸಂಪರ್ಕ ಕಡಿತಗೊಳಿಸಲು ಮುಂದಾಗಿದ್ದರು ಎಂದು ಹೇಳಲಾಗಿದೆ. ಇದಾದ ಬಳಿಕ ಗ್ರಾ.ಪಂ. ಅಧ್ಯಕ್ಷ ಅಬ್ದುಲ್ ರಹಿಮಾನ್ ಯುವತಿಯ ಮನೆಗೆ ನುಗ್ಗಿ, ಹಲ್ಲೆ ನಡೆಸಿ ಮಾನಭಂಗಕ್ಕೆ ಯತ್ನಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಘಟನೆ ಸಂಬಂಧಿ ಪ್ರಕರಣ ದಾಖಲಿಸಿಕೊಂಡಿರುವ ವಿಟ್ಲ ಪೊಲೀಸರು, ತನಿಖೆ ನಡೆಸುತ್ತಿದ್ದು, ತನಿಖೆಯ ಬಳಿಕ ಸತ್ಯಾಸತ್ಯತೆ ತಿಳಿದುಬರಬೇಕಿದೆ.

ಇತ್ತೀಚಿನ ಸುದ್ದಿ

Exit mobile version