15 ಗ್ರಾ.ಪಂ.ಗಳಲ್ಲಿ ಚುನಾವಣೆ ಬಹಿಷ್ಕರಿಸಿದ ಜನರು | ಕಾರಣ ಏನು ಗೊತ್ತಾ? - Mahanayaka

15 ಗ್ರಾ.ಪಂ.ಗಳಲ್ಲಿ ಚುನಾವಣೆ ಬಹಿಷ್ಕರಿಸಿದ ಜನರು | ಕಾರಣ ಏನು ಗೊತ್ತಾ?

22/12/2020

ಚಿಕ್ಕಮಗಳೂರು: ಕರ್ನಾಟಕದಲ್ಲಿ ಇಂದು ಮೊದಲನೆ ಹಂತದ ಚುನಾವಣೆ ನಡೆಯುತ್ತಿದ್ದು, ಚಿಕ್ಕಮಗಳೂರು ಜಿಲ್ಲೆಯ 15 ಗ್ರಾಮ ಪಂಚಾಯತ್ ಗಳಲ್ಲಿ ಜನರು ಮತದಾನ ಬಹಿಷ್ಕಾರ ಮಾಡಿದ್ದು, ಚುನಾವಣೆ ಪ್ರಕ್ರಿಯೆಯಿಂದಲೇ ದೂರ ಉಳಿದಿದ್ದಾರೆ.

ಕಸ್ತೂರಿ ರಂಗನ್ ವರದಿಯನ್ನು ಜಾರಿಗೊಳಿಸುವುದನ್ನು ವಿರೋಧಿಸಿ ಗ್ರಾಮಸ್ಥರು ಚುನಾವಣೆಯನ್ನು ಬಹಿಷ್ಕಾರ ಮಾಡಿದ್ದಾರೆ. ಈ 15 ಗ್ರಾಮಪಂಚಾಯತ್ ಗಳಲ್ಲಿ ಯಾರು ಕೂಡ ನಾಮಪತ್ರವನ್ನು ಸಲ್ಲಿಸಿಲ್ಲ.

ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಡಾ. ಕಸ್ತೂರಿ ರಂಗನ್ ವರದಿ ಜಾರಿಗೊಳಿಸುವ ಕುರಿತು ಅಂತಿಮ ತೀರ್ಮಾನ ಕೈಗೊಳ್ಳುವಂತೆ ಕೇಂದ್ರ ಪರಿಸರ, ಅರಣ್ಯ ಹಾಗೂ ಹವಾಮಾನ ಬದಲಾವಣೆ ಸಚಿವಾಲಯಕ್ಕೆ ಸೂಚನೆ ನೀಡಿದೆ. ಇದರಿಂದಾಗಿ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಬರುವ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳ ಜನರಲ್ಲಿ ಆತಂಕ ಎದುರಾಗಿದೆ.

ತಮ್ಮ ಅಸ್ತಿತ್ವಕ್ಕೆ ಕೇಂದ್ರ ಸರ್ಕಾರ ಹೊಡೆತ ನೀಡಿದ್ದು, ಇದರಿಂದಾಗಿ ಆತಂಕಕ್ಕೊಳಗಾಗಿರುವ  15 ಗ್ರಾಮ ಪಂಚಾಯತ್  ಜನರು  ಚುನಾವಣೆಯನ್ನು ಬಹಿಷ್ಕರಿಸುವ ಮೂಲಕ ಕೇಂದ್ರ ಸರ್ಕಾರದ ಗಮನ ಸೆಳೆಯಲು ಮುಂದಾಗಿದ್ದಾರೆ.

Disclaimer:

www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.

ಇತ್ತೀಚಿನ ಸುದ್ದಿ