ಗ್ರಾಮ ಪಂಚಾಯತ್ ಚುನಾವಣೆಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಜಯ-ಎಸ್.ಟಿ.ಸೋಮಶೇಖರ್ - Mahanayaka

ಗ್ರಾಮ ಪಂಚಾಯತ್ ಚುನಾವಣೆಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಜಯ-ಎಸ್.ಟಿ.ಸೋಮಶೇಖರ್

07/12/2020

ಬೆಂಗಳೂರು: ಗ್ರಾಮಪಂಚಾಯತ್ ಚುನಾವಣೆಯಲ್ಲಿ ಕಾವೇರಿ ಕೊಳ್ಳ ಪ್ರಾಂತ್ಯ, ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಹೆಚ್ಚು ಸ್ಥಾನ ಸಿಗಲಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ಅರುಣ್‌ ಸಿಂಗ್‌ ಅವರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು,  ಗ್ರಾಮಸ್ವರಾಜ್ಯ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.

ಕಂದಾಯ ಸಚಿವ ಆರ್. ಅಶೋಕ್ ನೇತೃತ್ವದಲ್ಲಿ ಗ್ರಾಮ ಸ್ವರಾಜ್ಯ ಕಾರ್ಯಕ್ರಮವನ್ನು ಮೈಸೂರು ವಿಭಾಗದಲ್ಲಿ ನಡೆಸಲಾಗಿದೆ. ಈ ವಿಭಾಗದ ಐದು ಜಿಲ್ಲೆಗಳಲ್ಲಿ 9 ಸಮಾವೇಶ ನಡೆಸಿದ್ದು, 40 ಮಂಡಲಗಳು ಭಾಗಿಯಾಗಿವೆ. ಈ ಕಾರ್ಯಕ್ರಮಗಳಲ್ಲಿ 3,946 ಶಕ್ತಿ ಮತ್ತು ಮಹಾ ಶಕ್ತಿ ಕೇಂದ್ರದ ಪ್ರಮುಖರು ಭಾಗವಹಿಸಿದ್ದರು ಎಂದು ತಿಳಿಸಿದರು.


Provided by

 ಕೇಂದ್ರ ಸರ್ಕಾರದ ಆತ್ಮನಿರ್ಭರ ಯೋಜನೆಯಡಿ ಕರ್ನಾಟಕದ ಪಾಲಿನ  ರೂ. 4,750 ಕೋಟಿಯಲ್ಲಿ ಮೊದಲನೇ ಕಂತಿನ ರೂಪದಲ್ಲಿ ಸುಮಾರು ರೂ.635 ಕೋಟಿ ಆರ್ಥಿಕ ನೆರವನ್ನು ಕರ್ನಾಟಕಕ್ಕೆ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದ್ದೇವೆ’ ಎಂದು ಅವರು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು.



 

ಇತ್ತೀಚಿನ ಸುದ್ದಿ