ವಿಧಾನ ಪರಿಷತ್ ಟಿಕೆಟ್ ಘೋಷಣೆ ಹಿನ್ನೆಲೆ: ಚಿಕ್ಕಮಗಳೂರಿನಲ್ಲಿ ಸಿ.ಟಿ.ರವಿಗೆ ಭವ್ಯ ಸ್ವಾಗತ - Mahanayaka

ವಿಧಾನ ಪರಿಷತ್ ಟಿಕೆಟ್ ಘೋಷಣೆ ಹಿನ್ನೆಲೆ: ಚಿಕ್ಕಮಗಳೂರಿನಲ್ಲಿ ಸಿ.ಟಿ.ರವಿಗೆ ಭವ್ಯ ಸ್ವಾಗತ

c t ravi
02/06/2024

ಚಿಕ್ಕಮಗಳೂರು:  ವಿಧಾನ ಪರಿಷತ್ ಟಿಕೆಟ್ ಘೋಷಣೆ ಹಿನ್ನೆಲೆ  ಚಿಕ್ಕಮಗಳೂರಿನಲ್ಲಿ ಸಿ.ಟಿ.ರವಿಗೆ ಕಾರ್ಯಕರ್ತರು ಭವ್ಯ ಸ್ವಾಗತ ನೀಡಿದ್ದು, ಸಿ.ಟಿ.ರವಿ ಚಿಕ್ಕಮಗಳೂರು ನಗರಕ್ಕೆ ಬರುತ್ತಿದ್ದಂತೆ ಪಟಾಕಿ ಸಿಡಿಸಿ ಸಂಭ್ರಮಿಸಿದರು.


Provided by

ನಗರದ ಹಿರೇಮಗಳೂರು ಸಮೀಪ ಸಿ.ಟಿ.ರವಿ ಪರ ಘೋಷಣೆ ಕೂಗಿ ಕಾರ್ಯಕರ್ತರು ಸಂಭ್ರಮ ವ್ಯಕ್ತಪಡಿಸಿದರು.

ಟಿಕೆಟ್ ಘೋಷಣೆಯಾದ ಬಳಿಕ ಸಿ.ಟಿ. ರವಿ ಮೊದಲ ಪ್ರತಿಕ್ರಿಯೆ ನೀಡಿದ್ದು, 95ನೇ ಇಸವಿಯಿಂದ ನಾನು ಯಾವುದನ್ನು ಕೇಳಿ ಪಡೆದಿಲ್ಲ, ಪಕ್ಷದ ಕೆಲಸ ಮಾಡುವುದಷ್ಟೇ ನನ್ನ ಕೆಲಸ ಎಂದಿದ್ದಾರೆ.


Provided by

ನನಗೇನು ಬೇಕು ಅದನ್ನ ಪಕ್ಷ ನಿರ್ಧಾರ ಮಾಡುತ್ತೆ,  ರಾಷ್ಟ್ರ ಹಾಗೂ ರಾಜ್ಯ ನಾಯಕರಿಗೆ ಅಭಿನಂದನೆ ಸಲ್ಲಿಸುತ್ತೇನೆ. ನಾಳೆ ಮತದಾನ ಮಾಡಿ ಬೆಂಗಳೂರಿಗೆ ತೆರಳಿ ನಾಮಪತ್ರ ಸಲ್ಲಿಸುತ್ತೇನೆ ಎಂದು ಅವರು ಹೇಳಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ