ಗ್ರಂಥಾಲಯ ಮೇಲ್ವಿಚಾರಕರ ಹುದ್ದೆ ಖಾಲಿ | SSLC ಪಾಸ್ ಆದವರು ಅರ್ಜಿ ಸಲ್ಲಿಸಿ - Mahanayaka

ಗ್ರಂಥಾಲಯ ಮೇಲ್ವಿಚಾರಕರ ಹುದ್ದೆ ಖಾಲಿ | SSLC ಪಾಸ್ ಆದವರು ಅರ್ಜಿ ಸಲ್ಲಿಸಿ

26/11/2020

ಶಿವಮೊಗ್ಗ:  ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕು ಗೊದ್ದನಕೊಪ್ಪ-ಸಾಮಾನ್ಯ ಅಭ್ಯರ್ಥಿ (ಗ್ರಾಮೀಣ) ಮತ್ತು ಹೊಸನಗರ ತಾಲೂಕು ನಗರ (ಮೂಡುಗೊಪ್ಪ)-ಸಾಮಾನ್ಯ ಅಭ್ಯರ್ಥಿ ಗ್ರಾಮ ಪಂಚಾಯತಿ ಗ್ರಂಥಾಲಯಗಳಿಗೆ ಮೇಲ್ವಿಚಾರಕರನ್ನು ಮಾಸಿಕ ರೂ. 7,000/- ಗಳ ಗೌರವ ಸಂಭಾವನೆ ಆಧಾರದ ಮೇಲೆ ನೇಮಕಾತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ.


ಆಸಕ್ತ ಅಭ್ಯರ್ಥಿಗಳು ಕನಿಷ್ಠ ಎಸ್.ಎಸ್.ಎಲ್.ಸಿ. ಪಾಸಾಗಿದ್ದು, ಆಯಾ ಪಂಚಾಯತಿಗಳ ಸ್ಥಳೀಯ ನಿವಾಸಿಗಳಾಗಿದ್ದು, ಗ್ರಾ.ಪಂ.ಗಳು ನಿಗಧಿಪಡಿಸಿದ ಮೀಸಲಾತಿಗೆ ಸೇರಿದ ಅಭ್ಯರ್ಥಿಗಳು ನಿಗಧಿತ ನಮೂನೆ ಅರ್ಜಿಯನ್ನು ಆಯಾ ಪಂಚಾಯತಿ ಕಚೇರಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಡಿಸೆಂಬರ್ 14 ರೊಳಗಾಗಿ ಸಲ್ಲಿಸಬೇಕು.

ಮಾಹಿತಿಗಾಗಿ ಸಂಬಂಧಿಸಿದ ಗ್ರಾ.ಪಂ. ಕಾರ್ಯಾಲಯ ಅಥವಾ ಉಪ ನಿರ್ದೇಶಕರ ಕಚೇರಿ ದೂ.ಸಂ.: 08182-222905, ಜಿಲ್ಲಾ ಕೇಂದ್ರ ಗ್ರಂಥಾಲಯ, ಶಿವಮೊಗ್ಗ ಇವರನ್ನು ಸಂಪರ್ಕಿಸುವುದು.

ಇತ್ತೀಚಿನ ಸುದ್ದಿ