ಅಧಿಕಾರದ ದುರಾಸೆ ಭಾರತದ ಏಕತೆ ಮತ್ತು ಭದ್ರತೆಯನ್ನು ಅಪಾಯಕ್ಕೆ ತಳ್ಳಿದೆ: ಎನ್ಸಿ-ಕಾಂಗ್ರೆಸ್ ಮೈತ್ರಿ ವಿರುದ್ಧ ಅಮಿತ್ ಶಾ ವಾಗ್ದಾಳಿ - Mahanayaka

ಅಧಿಕಾರದ ದುರಾಸೆ ಭಾರತದ ಏಕತೆ ಮತ್ತು ಭದ್ರತೆಯನ್ನು ಅಪಾಯಕ್ಕೆ ತಳ್ಳಿದೆ: ಎನ್ಸಿ-ಕಾಂಗ್ರೆಸ್ ಮೈತ್ರಿ ವಿರುದ್ಧ ಅಮಿತ್ ಶಾ ವಾಗ್ದಾಳಿ

24/08/2024

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮತ್ತೆ ಕಾಂಗ್ರೆಸ್ ಪಕ್ಷವನ್ನು ಟೀಕಿಸಿದ್ದಾರೆ. ಇವರು ‘ಅಧಿಕಾರದ ದುರಾಸೆ’ಯಿಂದಾಗಿ ಭಾರತದ ಏಕತೆ ಮತ್ತು ಭದ್ರತೆಯನ್ನು ಅಪಾಯಕ್ಕೆ ತಳ್ಳಿದ್ದಾರೆ ಎಂದು ಆರೋಪಿಸಿದ್ದಾರೆ. ಉಮರ್ ಅಬ್ದುಲ್ಲಾ ಅವರ ನ್ಯಾಷನಲ್ ಕಾನ್ಫರೆನ್ಸ್ (ಎನ್ಸಿ) ಯೊಂದಿಗಿನ ಮೈತ್ರಿಗಾಗಿ ಅವರು ಪಕ್ಷವನ್ನು ಗುರಿಯಾಗಿಸಿ ಮಾತನಾಡಿದ್ದು, ಈ ಪಾಲುದಾರಿಕೆಯು ರಾಜಕೀಯ ಲಾಭಕ್ಕಾಗಿ ದೇಶದ ಸಮಗ್ರತೆಗೆ ಧಕ್ಕೆ ತರುತ್ತದೆ ಎಂದು ಹೇಳಿದರು.

ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ನ್ಯಾಷನಲ್ ಕಾನ್ಫರೆನ್ಸ್ (ಎನ್ಸಿ) ಯೊಂದಿಗೆ ಚುನಾವಣಾ ಪೂರ್ವ ಮೈತ್ರಿಯನ್ನು ಕಾಂಗ್ರೆಸ್ ಘೋಷಿಸಿದ ನಂತರ, ಬಿಜೆಪಿ ಮುಖಂಡ ಅಮಿತ್ ಶಾ ಅವರು ಕಾಂಗ್ರೆಸ್ ಪಕ್ಷದ ಮೇಲೆ ತೀವ್ರ ದಾಳಿ ನಡೆಸಿದರು. ರಾಜಕೀಯ ಲಾಭಕ್ಕಾಗಿ ದೇಶದ ಏಕತೆ ಮತ್ತು ಭದ್ರತೆಯೊಂದಿಗೆ ರಾಜಿ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.

“ಅಧಿಕಾರದ ದುರಾಸೆಯನ್ನು ತೃಪ್ತಿಪಡಿಸಲು ದೇಶದ ಏಕತೆ ಮತ್ತು ಭದ್ರತೆಯನ್ನು ಪದೇ ಪದೇ ಅಪಾಯಕ್ಕೆ ತಳ್ಳುತ್ತಿರುವ ಕಾಂಗ್ರೆಸ್ ಪಕ್ಷವು ಜಮ್ಮು ಮತ್ತು ಕಾಶ್ಮೀರ ಚುನಾವಣೆಯಲ್ಲಿ ಅಬ್ದುಲ್ಲಾ ಕುಟುಂಬದ ‘ನ್ಯಾಷನಲ್ ಕಾನ್ಫರೆನ್ಸ್’ ನೊಂದಿಗೆ ಮೈತ್ರಿ ಮಾಡಿಕೊಳ್ಳುವ ಮೂಲಕ ತನ್ನ ದುರುದ್ದೇಶಗಳನ್ನು ಮತ್ತೊಮ್ಮೆ ಬಹಿರಂಗಪಡಿಸಿದೆ” ಎಂದು ವಾಗ್ದಾಳಿ ನಡೆಸಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ