ಅರಟಾಳ ಗ್ರಾ.ಪಂ ಕಾರ್ಯಾಲಯದಲ್ಲಿ 'ಗೃಹಲಕ್ಷ್ಮಿ' 3ನೇ ವರ್ಷದ ಸಂಭ್ರಮ: ಸಸಿ ನೆಡುವ ಮೂಲಕ ಚಾಲನೆ - Mahanayaka

ಅರಟಾಳ ಗ್ರಾ.ಪಂ ಕಾರ್ಯಾಲಯದಲ್ಲಿ ‘ಗೃಹಲಕ್ಷ್ಮಿ’ 3ನೇ ವರ್ಷದ ಸಂಭ್ರಮ: ಸಸಿ ನೆಡುವ ಮೂಲಕ ಚಾಲನೆ

aratala.jpg
20/07/2026

ಅಥಣಿ: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆ ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ, ತಾಲ್ಲೂಕಿನ ಅರಟಾಳ ಗ್ರಾಮ ಪಂಚಾಯತ್ ಕಾರ್ಯಾಲಯದಲ್ಲಿ ವಿಶೇಷ ಸಂಭ್ರಮಾಚರಣೆ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಂಗವಾಗಿ ಸಸಿ ನೆಡುವ ಮೂಲಕ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

ಅಥಣಿ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾದ ಶ್ರೀ ಹಣಮಂತ ಭೀ. ಹಟ್ಟಿ ಅವರು ಸಸಿ ನೆಡುವ ಮೂಲಕ ಈ ಅರ್ಥಪೂರ್ಣ ಕಾರ್ಯಕ್ರಮಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, “ಗೃಹಲಕ್ಷ್ಮಿ ಯೋಜನೆಯು ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಭದ್ರ ಬುನಾದಿ ಹಾಕಿದೆ. ಈ ಯೋಜನೆಯಿಂದಾಗಿ ಗ್ರಾಮೀಣ ಹಾಗೂ ನಗರ ಪ್ರದೇಶದ ಲಕ್ಷಾಂತರ ಮಹಿಳೆಯರಿಗೆ ಸ್ವಾವಲಂಬಿ ಬದುಕು ನಡೆಸಲು ಬಹಳಷ್ಟು ಅನುಕೂಲವಾಗಿದೆ,” ಎಂದು ಸರ್ಕಾರದ ಸಾಧನೆಯನ್ನು ಶ್ಲಾಘಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ (PDO) ಶ್ರೀ ಮಡಿವಾಳಪ್ಪ ರಾಮಗೊಂಡ, ಕಾರ್ಯದರ್ಶಿಗಳಾದ ಶ್ರೀ ಆನಂದ್ ಗಿರಜಾಗೋಳ, ಮುಖಂಡರಾದ ಶ್ರೀ ಮಲ್ಲಿಕಾರ್ಜುನ ಪಾಟೀಲ ಸೇರಿದಂತೆ ಗ್ರಾಮ ಪಂಚಾಯಿತಿಯ ಸರ್ವ ಸದಸ್ಯರು ಉಪಸ್ಥಿತರಿದ್ದರು. ಅಲ್ಲದೆ ಗ್ರಾಮದ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಪಾರ ಸಂಖ್ಯೆಯ ಗ್ರಾಮಸ್ಥರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

 

ಇತ್ತೀಚಿನ ಸುದ್ದಿ