ಗೃಹಲಕ್ಷ್ಮೀ ಹಣ ಕೂಡಿಟ್ಟು ಗ್ರಾಮದ ಶಾಲೆಗೆ ವಾಟರ್ ಫಿಲ್ಟರ್ ನೀಡಿದ ಮಹಿಳೆ! - Mahanayaka

ಗೃಹಲಕ್ಷ್ಮೀ ಹಣ ಕೂಡಿಟ್ಟು ಗ್ರಾಮದ ಶಾಲೆಗೆ ವಾಟರ್ ಫಿಲ್ಟರ್ ನೀಡಿದ ಮಹಿಳೆ!

griha lakshmi yojana
22/02/2025

ಮಂಡ್ಯ: ಗೃಹಲಕ್ಷ್ಮೀ ಹಣವನ್ನು ಕೂಡಿಟ್ಟು ಗೃಹಿಣಿಯೊಬ್ಬರು ತಮ್ಮೂರಿನ ಸರ್ಕಾರಿ ಶಾಲೆಗೆ ವಾಟರ್ ಫಿಲ್ಟರ್ ಉಡುಗೊರೆಯಾಗಿ ನೀಡಿದ್ದು, ಅವರ ಸಾಮಾಜಿಕ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.


Provided by

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಾಬುರಾಯನಕೊಪ್ಪಲಿನ ವಿಜಯಲಕ್ಷ್ಮೀ ಅವರು ಈ ಸಾಮಾಜಿಕ ಕಾರ್ಯ ಮಾಡಿದ್ದಾರೆ. ಅವರ ಈ ಸಮಾಜ ಸೇವೆಗೆ  ಪತಿ ರಂಗನಾಥ್ ಕೂಡ ಸಾಥ್ ನೀಡಿದ್ದು ಹೆಚ್ಚುವರಿ ಹಣವನ್ನು ಬರಿಸಿದ ಅವರು ಫಿಲ್ಟರ್ ಕೊಳ್ಳಲು ಸಹಕರಿಸಿದ್ದಾರೆ.

ಸುಮಾರು 50 ಸಾವಿರ ರೂಪಾಯಿ ಮೌಲ್ಯದ ಫಿಲ್ಟರ್ ನ್ನು ಕೊಡುಗೆಯಾಗಿ ನೀಡಿದ್ದಾರೆ.  ಇವರ ಸಾಮಾಜಿಕ ಸೇವೆಗೆ ಶಾಲೆಯ ವಿದ್ಯಾರ್ಥಿಗಳು ಸಿಬ್ಬಂದಿ ಮೆಚ್ಚುಗೆ ವ್ಯಕ್ತಪಡಿಸಿದ್ದು, ಧನ್ಯವಾದಗಳನ್ನು ತಿಳಿಸಿದ್ದಾರೆ.


Provided by

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BR3b3qhWZWaCzpD1m6N5uu

ಇತ್ತೀಚಿನ ಸುದ್ದಿ