ಗೃಹ ಸಚಿವರ ನಿವಾಸಕ್ಕೆ ಎಬಿವಿಪಿ ಕಾರ್ಯಕರ್ತರಿಂದ ಮುತ್ತಿಗೆ: ಲಘು ಲಾಠಿ ಪ್ರಹಾರ

abvp
30/07/2022

ADS

ಬೆಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಮತ್ತು ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಬೆಂಗಳೂರಿನಲ್ಲಿ ಅರಗ ಜ್ಞಾನೇಂದ್ರ  ಅವರ ನಿವಾಸಕ್ಕೆ ಮುತ್ತಿಗೆ ಹಾಕಿ ಸರ್ಕಾರದ ವಿರುದ್ಧ ಹಾಗೂ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಗೃಹ ಸಚಿವರ ಮನೆ ಮುಂದೆ ಜಮಾಯಿಸಿದ ಪ್ರತಿಭಟನಾಕಾರರನ್ನು ಪೊಲೀಸರು ತಡೆಯಲು ಯತ್ನಿಸಿದರು. ಆದರೂ ಮನೆಯ ಗೇಟ್ ತಳ್ಳಿ ಬಾಗಿಲ ಬಳಿಗೆ ಧಾವಿಸಿದ ಎಬಿವಿಪಿ ಕಾರ್ಯಕರ್ತರು, ಪ್ರವೀಣ್ ಸಾವಿಗೆ ನ್ಯಾಯ ಬೇಕು. ಗೃಹ ಸಚಿವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಗೃಹ ಸಚಿವರ ನಿವಾಸದೊಳಗೆ ಪ್ರವೇಶಿಸಲು ಪ್ರತಿಭಟನಾಕಾರರು ಯತ್ನಿಸಿದ್ದು, ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ತಡೆದಿದ್ದಾರೆ. ಈ ವೇಳೆ ಎಬಿವಿಪಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ನೂಕಾಟ ತಳ್ಳಾಟ ನಡೆದಿದೆ.

50ಕ್ಕೂ ಅಧಿಕ ಪ್ರತಿಭಟನಾಕಾರರು ಇದ್ದರು. ಈ ವೇಳೆ ಪರಿಸ್ಥಿತಿ ನಿಯಂತ್ರಿಸಲು ಎಬಿವಿಪಿ ಕಾರ್ಯಕರ್ತರ ಮೇಲೆ ಲಘು ಲಾಠಿ ಪ್ರಹಾರ ನಡೆಸಲಾಯಿತು. ಪ್ರತಿಭಟನಾಕಾರರ ಆಕ್ರೋಶಕ್ಕೆ ಗೃಹ ಸಚಿವರ ನಿವಾಸದ ಬಳಿ ಹೂ ಕುಂಡಗಳು ಪುಡಿಪುಡಿಯಾಗಿವೆ. ಘಟನೆಯಲ್ಲಿ 50ಕ್ಕೂ ಅಧಿಕ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ  ಪಡೆದಿದ್ದಾರೆ.

ADS

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version