2,000 ರೂ.ವರೆಗಿನ UPI ವಹಿವಾಟುಗೆ GST ವದಂತಿ: ಹಣಕಾಸು ಸಚಿವಾಲಯ ಸ್ಪಷ್ಟನೆ - Mahanayaka
12:33 AM Thursday 18 - September 2025

2,000 ರೂ.ವರೆಗಿನ UPI ವಹಿವಾಟುಗೆ GST ವದಂತಿ: ಹಣಕಾಸು ಸಚಿವಾಲಯ ಸ್ಪಷ್ಟನೆ

upi
19/04/2025

ನವದೆಹಲಿ: 2,000 ರೂಪಾಯಿಗಿಂತ ಹೆಚ್ಚಿನ UPI ವಹಿವಾಟುಗಳ ಮೇಲೆ ಜಿಎಸ್ ಟಿ ವಿಧಿಸಲಾಗುವುದು ಎನ್ನುವ ಸುದ್ದಿ ಹರಿದಾಡಿದ್ದ ಬೆನ್ನಲ್ಲೇ ಕೇಂದ್ರ ಸರ್ಕಾರದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಈ ಸಂಬಂಧ ಹಣಕಾಸು ಸಚಿವಾಲಯ ಸ್ಪಷ್ಟನೆ ನೀಡಿದೆ.

2,000 ರೂಪಾಯಿಗಿಂತ ಹೆಚ್ಚಿನ UPI ವಹಿವಾಟುಗಳ ಮೇಲೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವಿಧಿಸುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಹಣಕಾಸು ಸಚಿವಾಲಯ ಸ್ಪಷ್ಟಪಡಿಸಿದೆ. ಇಂತಹ ವದಂತಿಗಳು ಆಧಾರರಹಿತ ಮತ್ತು ತಪ್ಪುದಾರಿಗೆಳೆಯುವಂತಹವು ಎಂದು ಪ್ರತಿಕ್ರಿಯಿಸಿದೆ.

ಯುಪಿಐ ವಹಿವಾಟು ಮೇಲೆ ಜಿಎಸ್‌ ಟಿ ವಿಧಿಸುವ ವರದಿಗಳು ಸಂಪೂರ್ಣವಾಗಿ ಸುಳ್ಳು ಮತ್ತು ಆಧಾರರಹಿತ ಎಂದು ಸಚಿವಾಲಯ ಹೇಳಿದೆ.

ಜನವರಿ 2020 ರಿಂದ, UPI P2M (ವ್ಯಕ್ತಿಯಿಂದ ವ್ಯಾಪಾರಿಗೆ) ವಹಿವಾಟುಗಳ ಮೇಲಿನ MDR (ವ್ಯಾಪಾರಿ ರಿಯಾಯಿತಿ ದರ) ಶೂನ್ಯವಾಗಿದೆ. ಆದ್ದರಿಂದ, ಇವುಗಳ ಮೇಲೆ ಜಿಎಸ್‌ ಟಿ ಅನ್ವಯಿಸುವುದಿಲ್ಲ ಎಂದಿದ್ದಾರೆ.

ಇತ್ತೀಚೆಗೆ, 2000 ರೂಪಾಯಿಗಳಿಗಿಂತ ಹೆಚ್ಚಿನ UPI ವಹಿವಾಟುಗಳ ಮೇಲೆ ಕೇಂದ್ರ ಸರ್ಕಾರವು GST ವಿಧಿಸಲು ಯೋಜಿಸುತ್ತಿದೆ ಎಂಬ ಸುದ್ದಿ ವ್ಯಾಪಕವಾಗಿ ಹರಿದಾಡಿತ್ತು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ